Hebrews 2:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ನಮಗೆ ಬೋಧಿಸಲ್ಪಟ್ಟ ಸಂಗತಿಗಳನ್ನು ಬಹಳ ಎಚ್ಚರಿಕೆಯಿಂದ ಅನುಸರಿಸಬೇಕು. ಸತ್ಯಮಾರ್ಗವನ್ನು ಬಿಟ್ಟು ತಪ್ಪಿಹೋಗದಂತೆ ಎಚ್ಚರಿಕೆಯಿಂದಿರಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದ್ದರಿಂದ ನಾವು ಕೇಳಿದ ಸಂಗತಿಗಳಿಗೆ ತಪ್ಪಿಹೋಗದಂತೆ ಅವುಗಳಿಗೆ ಹೆಚ್ಚಾಗಿ ಲಕ್ಷ್ಯಕೊಡುವವರಾಗಿರಬೇಕು.
Kannada BSI Bible 2016
ಆದದರಿಂದ ನಾವು ಕೇಳಿದ ಸಂಗತಿಗಳಿಗೆ ಯಾವಾಗಲಾದರೂ ಜಾರಿ ಹೋದೇ ವೆಂದು ಅವುಗಳಿಗೆ ಹೆಚ್ಚಾಗಿ ಲಕ್ಷ್ಯಕೊಡುವವರಾಗಿ ರತಕ್ಕದ್ದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದದರಿಂದ ನಾವು ಕೇಳಿದ ಸಂಗತಿಗಳಿಗೆ ತಪ್ಪಿಹೋದೇವೆಂದು ಭಯಪಟ್ಟು ಅವುಗಳಿಗೆ ಹೆಚ್ಚಾಗಿ ಲಕ್ಷ್ಯಕೊಡುವವರಾಗಿರಬೇಕು.
Kannada Bible (KNCL) BSI 2016
ಆದ್ದರಿಂದಲೇ ಹುಚ್ಚುಹೊಳೆಯಲ್ಲಿ ಕೊಚ್ಚಿಹೋಗದ ಹಾಗೆ ನಾವು ಕೇಳಿರುವ ಸತ್ಯಗಳಿಗೆ ಬಿಗಿಯಾಗಿ ಕಚ್ಚಿಕೊಳ್ಳಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ದಾರಿಬಿಟ್ಟು ಹೋಗದಂತೆ, ನಾವು ಕೇಳಿದ ಸಂಗತಿಗಳಿಗೆ ಹೆಚ್ಚು ಲಕ್ಷ್ಯ ಕೊಡುವವರಾಗಿರಬೇಕು.