Hebrews 2:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸಮಸ್ತವನ್ನು ಸೃಷ್ಟಿಸಿದಾತನು ದೇವರೇ. ಸಮಸ್ತವು ಆತನ ಮಹಿಮೆಗಾಗಿಯೇ ಸೃಷ್ಟಿಯಾಯಿತು. ದೇವರು ತನ್ನವರೇ ಆದ ಅನೇಕ ಜನರನ್ನು ಹೊಂದಿಕೊಂಡು ಅವರೊಂದಿಗೆ ತನ್ನ ಮಹಿಮೆಯನ್ನು ಹಂಚಿಕೊಳ್ಳಲು ಬಯಸಿದನು. ಆದ್ದರಿಂದ ಆತನು ಅವರನ್ನು ರಕ್ಷಣೆಗೆ ನಡೆಸಲು ಪರಿಪೂರ್ಣನಾದ ಒಬ್ಬಾತನನ್ನು ನಿರ್ಮಿಸಿದನು. ಆತನೇ ಯೇಸು. ದೇವರು ಆತನನ್ನು ಬಾಧೆಗಳ ಮೂಲಕವೇ ಪರಿಪೂರ್ಣನಾದ ರಕ್ಷಕನನ್ನಾಗಿ ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಮಸ್ತವು ಯಾವನಿಗೋಸ್ಕರವೂ ಯಾವನಿಂದಲೂ ಉಂಟಾಯಿತೋ, ಆತನು ಬಹುಮಂದಿ ಪುತ್ರರನ್ನು ಮಹಿಮೆಗೆ ಸೇರಿಸುವುದಕ್ಕಾಗಿ, ಅವರ ರಕ್ಷಣಾನಾಯಕನನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವುದು ಆತನಿಗೆ ಯುಕ್ತವಾಗಿತ್ತು.
Kannada BSI Bible 2016
ಸಮಸ್ತವು ಯಾವಾತನಿಗೋಸ್ಕರವೂ ಯಾವಾತನಿಂದಲೂ ಉಂಟಾಯಿತೋ ಆತನು ಬಹುಮಂದಿ ಪುತ್ರರನ್ನು ಪ್ರಭಾವಕ್ಕೆ ಸೇರಿಸುವಲ್ಲಿ ಅವರ ರಕ್ಷಣಾ ನಾಯಕನನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವದು ಆತನಿಗೆ ಯುಕ್ತವಾಗಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಮಸ್ತವು ಯಾವನಿಗೋಸ್ಕರವೂ ಯಾವನಿಂದಲೂ ಉಂಟಾಯಿತೋ ಆತನು ಬಹು ಮಂದಿ ಪುತ್ರರನ್ನು ಪ್ರಭಾವಕ್ಕೆ ಸೇರಿಸುವಲ್ಲಿ ಅವರ ರಕ್ಷಣಾಕರ್ತನನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವದು ಆತನಿಗೆ ಯುಕ್ತವಾಗಿತ್ತು.
Kannada Bible (KNCL) BSI 2016
ಸಮಸ್ತವನ್ನೂ ಸೃಷ್ಟಿಸಿ ಪರಿಪಾಲಿಸಿಕೊಂಡುಬರುವ ದೇವರು ತಮ್ಮ ಮಹಿಮೆಯಲ್ಲಿ ಪಾಲುಗೊಳ್ಳಲು ಮಕ್ಕಳನೇಕರನ್ನು ಕರೆತರುವಂತೆ ಉದ್ಧಾರ ಪ್ರವರ್ತಕರಾದ ಯೇಸುವನ್ನು ಹಿಂಸೆಬಾಧೆಗಳ ಮೂಲಕ ಪರಿಪೂರ್ಣವಾಗಿಸಿದ್ದು ಯುಕ್ತವೇ ಸರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ಸಮಸ್ತವನ್ನೂ ತಮಗೋಸ್ಕರವೂ ತಮ್ಮ ಮೂಲಕವೂ ಉಂಟುಮಾಡಿ ಬಹುಮಂದಿ ಮಕ್ಕಳನ್ನು ಮಹಿಮೆಗೆ ತರುವಂತೆ ಅವರ ರಕ್ಷಣಾ ನಾಯಕರಾದ ಕ್ರಿಸ್ತ ಯೇಸುವನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವುದು ದೇವರಿಗೆ ಯುಕ್ತವಾಗಿತ್ತು.