Hebrews 2:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜನರನ್ನು ಪರಿಶುದ್ಧರನ್ನಾಗಿ ಮಾಡುವ ಯೇಸುವೂ ಮತ್ತು ಆತನಿಂದ ಪರಿಶುದ್ಧರಾಗುವ ಜನರೂ ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದಾರೆ. ಆದ್ದರಿಂದ ಆ ಜನರನ್ನು ಸಹೋದರರೆಂದೂ ಸಹೋದರಿಯರೆಂದೂ ಕರೆಯಲು ಆತನು (ಯೇಸು) ನಾಚಿಕೆಪಡುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಕೆಂದರೆ ಪವಿತ್ರಗೊಳಿಸುವವನಿಗೂ ಪವಿತ್ರರಾದವರಿಗೂ ಒಬ್ಬಾತನೇ ಮೂಲ ಆತನು ದೇವರೇ. ಈ ಕಾರಣದಿಂದ ಅವರನ್ನು ಪವಿತ್ರಗೊಳಿಸುವಾತನು ಅವರನ್ನು ಸಹೋದರರೆಂದು ಕರೆಯುವುದಕ್ಕೆ ನಾಚಿಕೆಪಡಲಿಲ್ಲ.
Kannada BSI Bible 2016
ಯಾಕಂದರೆ ಪವಿತ್ರ ಮಾಡುವಾತನೂ ಪವಿತ್ರರಾದವರೆಲ್ಲರೂ ಒಬ್ಬಾತನಿಗೆ ಸಂಬಂಧಪಟ್ಟವರಾಗಿದ್ದಾರೆ. ಈ ಕಾರಣದಿಂದ ಆತನು ಅವರನ್ನು ಸಹೋದರರೆಂದು ಕರೆಯುವದಕ್ಕೆ ನಾಚಿಕೆ ಪಡದೆ--
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕಂದರೆ ಪವಿತ್ರ ಮಾಡುವಾತನಿಗೂ ಪವಿತ್ರರಾಗುವವರೆಲ್ಲರಿಗೂ ಒಬ್ಬನೇ ತಂದೆ ಇದ್ದಾನೆ. ಈ ಕಾರಣದಿಂದ ಪವಿತ್ರ ಮಾಡುವಾತನು ಪವಿತ್ರರಾಗುವವರನ್ನು ಸಹೋದರರೆನ್ನುವದಕ್ಕೆ ನಾಚಿಕೆಪಡದೆ -
Kannada Bible (KNCL) BSI 2016
ಪವಿತ್ರಗೊಳಿಸುವವನಿಗೂ ಪವಿತ್ರರಾಗುವವರಿಗೂ ಒಬ್ಬನೇ ತಂದೆ. ಈ ಕಾರಣ, ಪವಿತ್ರಗೊಳಿಸುವ ಯೇಸು, ಪವಿತ್ರರಾಗುವವರನ್ನು ‘ಸಹೋದರರು’ ಎಂದು ಕರೆಯಲು ನಾಚಿಕೆಪಡಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪವಿತ್ರ ಮಾಡುವ ದೇವರೂ ಪವಿತ್ರರಾದವರೆಲ್ಲರೂ ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದಾರೆ. ಈ ಕಾರಣದಿಂದ ಯೇಸು ಅವರನ್ನು ಸಹೋದರರೆಂದು ಕರೆಯುವುದಕ್ಕೆ ನಾಚಿಕೆಪಡದೆ,