Hebrews 2:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಮಗೆ ದಯಪಾಲಿಸಲ್ಪಟ್ಟ ಈ ವಿಶೇಷ ರಕ್ಷಣೆಯನ್ನು ನಾವು ಅಲಕ್ಷ್ಯ ಮಾಡಿದರೆ ದಂಡನೆಯಂತೂ ಖಂಡಿತ. ಇದು ಪ್ರಭುವಿನಿಂದ ಮೊದಲು ಹೇಳಲ್ಪಟ್ಟಿತು. ಆತನಿಂದ ಕೇಳಿದವರೇ ಈ ರಕ್ಷಣೆಯ ಕುರಿತಾಗಿ ನಮಗೆ ಸ್ಥಿರಪಡಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಮ್ಮ ಮುಂದಿಟ್ಟಿರುವ ಈ ಅತ್ಯಂತ ಶ್ರೇಷ್ಠವಾದ ರಕ್ಷಣೆಯನ್ನು ನಾವು ಅಲಕ್ಷ್ಯ ಮಾಡಿದರೆ ತಪ್ಪಿಸಿಕೊಳ್ಳುವುದಾದರೂ ಹೇಗೆ? ಇದು ಕರ್ತನಿಂದ ಮೊದಲು ಹೇಳಲ್ಪಟ್ಟಿತು ಮತ್ತು ಆತನಿಂದ ಕೇಳಿದವರು ಇದನ್ನು ನಮಗೆ ದೃಢಪಡಿಸಿಕೊಟ್ಟರು.
Kannada BSI Bible 2016
ಎಷ್ಟೋ ದೊಡ್ಡ ಈ ರಕ್ಷಣೆಯನ್ನು ನಾವು ಅಲಕ್ಷ್ಯಮಾಡಿದರೆ ತಪ್ಪಿಸಿ ಕೊಳ್ಳುವದು ಹೇಗೆ? ಇದು ಕರ್ತನಿಂದ ಮೊದಲು ಹೇಳಲಾರಂಭಿಸಿತು. ಆತನಿಂದ ಕೇಳಿದವರು ಇದನ್ನು ನಮಗೆ ಸ್ಥಿರಪಡಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಅತ್ಯಂತ ವಿಶೇಷ ರಕ್ಷಣೆಯನ್ನು ನಾವು ಅಲಕ್ಷ್ಯಮಾಡಿದರೆ ತಪ್ಪಿಸಿಕೊಳ್ಳುವದು ಹೇಗೆ? ಇದು ಕರ್ತನಿಂದ ಮೊದಲು ಹೇಳಲ್ಪಟ್ಟಿತು; ಆತನಿಂದ ಕೇಳಿದವರು ಇದನ್ನು ನಮಗೆ ಸ್ಥಿರಪಡಿಸಿದರು;
Kannada Bible (KNCL) BSI 2016
ಇಂಥ ಉತ್ಕೃಷ್ಟ ಜೀವೋದ್ಧಾರವನ್ನು ಪಡೆದಿರುವ ನಾವು ಅದನ್ನು ಅಲಕ್ಷ್ಯಮಾಡಿದಲ್ಲಿ ಶಿಕ್ಷೆಯಿಂದ ಹೇಗೆತಾನೆ ತಪ್ಪಿಸಿಕೊಳ್ಳಬಲ್ಲೆವು? ಈ ಜೀವೋದ್ಧಾರವನ್ನು ಮೊತ್ತಮೊದಲು ಸಾರಿದವರು ಪ್ರಭುವೇ. ಅವರನ್ನು ಆಗ ಆಲಿಸಿದವರು ಅದನ್ನು ನಮಗೆ ಪ್ರಮಾಣೀಕರಿಸಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಂತಹ ಮಹಾ ರಕ್ಷಣೆಯನ್ನು ನಾವು ಅಲಕ್ಷ್ಯ ಮಾಡಿದರೆ ತಪ್ಪಿಸಿಕೊಳ್ಳುವುದು ಹೇಗೆ? ಈ ರಕ್ಷಣೆಯನ್ನು ನಮಗೆ ಕರ್ತ ಆಗಿರುವ ಯೇಸುವೇ ಮೊದಲು ತಿಳಿಸಿದ್ದಾರೆ. ಅವರಿಂದ ಕೇಳಿಸಿಕೊಂಡವರೂ ನಮಗೆ ಆ ರಕ್ಷಣೆಯನ್ನು ದೃಢಪಡಿಸಿದ್ದಾರೆ.