Hebrews 2:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕೇವಲ ಸ್ವಲ್ಪಕಾಲದವರೆಗೆ ನೀನು ಅವನನ್ನು ದೇವದೂತರಿಗಿಂತ ಸ್ವಲ್ಪವೇ ಕಡಿಮೆ ಮಾಡಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ಮನುಷ್ಯನನ್ನು ದೇವದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಉಂಟುಮಾಡಿದ್ದಿಯಲ್ಲಾ. ಮಹಿಮೆಯನ್ನೂ ಗೌರವವನ್ನೂ ಅವನಿಗೆ ಕಿರೀಟವಾಗಿ ಇಟ್ಟಿದ್ದೀ.
Kannada BSI Bible 2016
ನೀನು ಅವನನ್ನು ದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಮಾಡಿದಿಯಲ್ಲಾ; ಪ್ರಭಾವ ವನ್ನೂ ಮಾನವನ್ನೂ ಅವನಿಗೆ ಕಿರೀಟವಾಗಿ ಇಟ್ಟು ನಿನ್ನ ಕೈಕೆಲಸಗಳ ಮೇಲೆ ಅವನನ್ನು ನೇಮಿಸಿದ್ದೀ;
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನನ್ನು ದೇವದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಮಾಡಿದಿಯಲ್ಲಾ; ಪ್ರಭಾವವನ್ನೂ ಮಾನವನ್ನೂ ಅವನಿಗೆ ಕಿರೀಟವಾಗಿ ಇಟ್ಟಿ;
Kannada Bible (KNCL) BSI 2016
ನರಪುತ್ರನು ಎನಿತರವನು ನೀನವನ ಅರಸಿಬರಲು? ದೇವದೂತರಿಗಿಂತಲೂ ಆತನನು ತುಸುವೇ ತಗ್ಗಿಸಿದೆ ಘನಗೌರವವನು, ಸಿರಿಮಹಿಮೆಯನು ಮುಕುಟವಾಗಿ ಮುಡಿಸಿದೆ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ಆತನನ್ನು ದೇವದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಮಾಡಿದೆಯಲ್ಲಾ? ಮಹಿಮೆಯನ್ನೂ ಮಾನವನ್ನೂ ಆತನಿಗೆ ಕಿರೀಟವನ್ನಾಗಿ ಇಟ್ಟೆ.