Hebrews 2:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀನು ಎಲ್ಲವನ್ನು ಅವನಿಗೆ ಅಧೀನಗೊಳಿಸಿರುವೆ. \rq ಕೀರ್ತನೆ. 8:4-6\rq*
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಲ್ಲವನ್ನೂ ಅವನ ಪಾದಗಳ ಕೆಳಗೆ ಹಾಕಿ ಅವನಿಗೆ ಅಧೀನಮಾಡಿದ್ದೀಯಲ್ಲವೇ” ಎಂದು ಪವಿತ್ರಶಾಸ್ತ್ರದಲ್ಲಿ ಒಬ್ಬನು ಒಂದೆಡೆ ಸಾಕ್ಷಿ ಹೇಳಿದನು. ಆತನು ಎಲ್ಲವನ್ನೂ ಮಾನವಕುಲಕ್ಕೆ ಅಧೀನ ಮಾಡಿದ್ದಾನೆಂಬುದರಲ್ಲಿ ಅವನಿಗೆ ಒಂದನ್ನಾದರೂ ಅಧೀನಮಾಡದೆ ಬಿಡಲಿಲ್ಲವೆಂದು ಹೇಳಿದ ಹಾಗಾಯಿತು. ಆದರೆ ಎಲ್ಲವೂ ಅವನಿಗೆ ಅಧೀನವಾಗಿರುವುದಾಗಿ ನಾವು ಇನ್ನು ಕಂಡಿಲ್ಲ.
Kannada BSI Bible 2016
ಎಲ್ಲವನ್ನೂ ಅವನ ಪಾದಗಳ ಕೆಳಗೆ ಹಾಕಿ ಅವನಿಗೆ ಅಧೀನಮಾಡಿದ್ದೀಯಲ್ಲವೇ ಎಂದು ಸಾಕ್ಷಿ ಹೇಳಿದನು; ಆತನು ಎಲ್ಲವನ್ನೂ ಮನುಷ್ಯನಿಗೆ ಅಧೀನಮಾಡಿದ ನೆಂಬದರಲ್ಲಿ ಅವನಿಗೆ ಒಂದನ್ನಾದರೂ ಅಧೀನಮಾಡದೆ ಬಿಡಲಿಲ್ಲ; ಆದರೆ ಎಲ್ಲವೂ ಅವನಿಗೆ ಅಧೀನವಾಗಿರು ವದನ್ನು ನಾವು ಇನ್ನೂ ಕಾಣುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಲ್ಲವನ್ನೂ ಅವನ ಪಾದಗಳ ಕೆಳಗೆ ಹಾಕಿ ಅವನಿಗೆ ಅಧೀನಮಾಡಿದ್ದೀಯಲ್ಲವೇ ಎಂದು ಸ್ಪಷ್ಟವಾಗಿ ಹೇಳಿದನು. ಆತನು ಎಲ್ಲವನ್ನೂ ಮನುಷ್ಯನಿಗೆ ಅಧೀನಮಾಡಿದನೆಂಬದರಲ್ಲಿ ಅವನಿಗೆ ಒಂದನ್ನಾದರೂ ಅಧೀನಮಾಡದೆ ಬಿಡಲಿಲ್ಲವೆಂದು ಹೇಳಿದ ಹಾಗಾಯಿತು; ಆದರೆ ಎಲ್ಲವೂ ಅವನಿಗೆ ಅಧೀನವಾಗಿರುವದನ್ನು ನಾವು ಇನ್ನೂ ಕಾಣುವದಿಲ್ಲ.
Kannada Bible (KNCL) BSI 2016
ಆತನಿಗೆ ನೀನೆಲ್ಲವನು ಅಧೀನವಾಗಿಸಿದೆ.” ಹೀಗೆ ದೇವರು ಎಲ್ಲವನ್ನು ಆತನಿಗೆ ಅಧೀನಪಡಿಸಿರುವುದರಿಂದ ಆತನಿಗೆ ಅಧೀನವಲ್ಲದ್ದು ಏನೂ ಇಲ್ಲವೆಂದಾಯಿತು. ಆದರೂ ಸದ್ಯಕ್ಕೆ ಎಲ್ಲವೂ ಆತನಿಗೆ ಅಧೀನವಾಗಿರುವುದನ್ನು ನಾವು ಕಾಣುತ್ತಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎಲ್ಲವನ್ನೂ ಆತನ ಪಾದಗಳ ಕೆಳಗೆ ಹಾಕಿ ಆತನಿಗೆ ಅಧೀನ ಮಾಡಿದ್ದೀಯಲ್ಲವೇ?” ಹೀಗೆ ದೇವರು ಎಲ್ಲವನ್ನೂ ಆತನಿಗೆ ಅಧೀನ ಮಾಡಿದರೆಂಬುದರಲ್ಲಿ ಆತನಿಗೆ ಒಂದನ್ನಾದರೂ ಅಧೀನಮಾಡದೆ ಬಿಡಲಿಲ್ಲ ಎಂಬುದು ಸ್ವಷ್ಟವಾಗುತ್ತದೆ. ಆದರೆ ಈಗ ಎಲ್ಲವೂ ಆತನಿಗೆ ಅಧೀನವಾಗಿರುವುದನ್ನು ನಾವು ಇನ್ನೂ ಕಾಣುವದಿಲ್ಲ.