Hebrews 2:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕೇವಲ ಸ್ವಲ್ಪಕಾಲದವರೆಗೆ ಯೇಸುವು ದೇವದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಮಾಡಲ್ಪಟ್ಟನು. ಆದರೆ ನಾವೀಗ ವೈಭವ, ಗೌರವಗಳೆಂಬ ಕಿರೀಟ ಧರಿಸಿರುವ ಆತನನ್ನು ನೋಡುತ್ತೇವೆ. ಏಕೆಂದರೆ ದೇವರ ಕೃಪೆಯ ನಿಮಿತ್ತ ಆತನು ಎಲ್ಲರಿಗೋಸ್ಕರ ಸಂಕಟ ಅನುಭವಿಸಿ ಮರಣಹೊಂದಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೂ ದೇವದೂತರಿಗಿಂತ ಸ್ವಲ್ಪ ಕಡಿಮೆಯಾಗಿ ಮಾಡಲ್ಪಟ್ಟವನಾದ ಯೇಸು ಬಾಧೆಯನ್ನುಭವಿಸಿ ಮೃತಪಟ್ಟದ್ದರಿಂದಲೇ ಮಹಿಮೆಯನ್ನೂ ಗೌರವವನ್ನೂ ಕಿರೀಟವಾಗಿ ಹೊಂದಿರುವುದನ್ನು ನಾವು ನೋಡುತ್ತೇವೆ. ಅದಕ್ಕಾಗಿಯೇ ದೇವರ ಕೃಪೆಯಿಂದ ಯೇಸು ಎಲ್ಲರಿಗೋಸ್ಕರ ಮರಣವನ್ನು ಅನುಭವಿಸಿದ್ದಾನೆ.
Kannada BSI Bible 2016
ಆದರೂ ದೂತರಿಗಿಂತ ಸ್ವಲ್ಪ ಕಡಿಮೆಯಾಗಿ ಮಾಡಲ್ಪಟ್ಟ ಒಬ್ಬಾತನು ಅಂದರೆ ಯೇಸುವು, ಪ್ರಭಾವವನ್ನೂ ಮಾನವನ್ನೂ ಕಿರೀಟವಾಗಿ ಹೊಂದಿರುವದನ್ನು ನಾವು ನೋಡುತ್ತೇವೆ; ಆತನು ಮೃತಪಟ್ಟದ್ದರಿಂದಲೇ ಮಾನ ಪ್ರಭಾವಗಳನ್ನು ಹೊಂದಿದನು; ಆತನು ದೇವರ ಕೃಪೆ ಯಿಂದ ಎಲ್ಲರಿಗೋಸ್ಕರ ಮರ
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೂ ದೇವದೂತರಿಗಿಂತ ಸ್ವಲ್ಪ ಕಡಿಮೆಯಾಗಿ ಮಾಡಲ್ಪಟ್ಟ ಒಬ್ಬಾತನು, ಅಂದರೆ ಯೇಸುವು, ಪ್ರಭಾವವನ್ನೂ ಮಾನವನ್ನೂ ಕಿರೀಟವಾಗಿ ಹೊಂದಿರುವದನ್ನು ನಾವು ನೋಡುತ್ತೇವೆ. ಮೃತಪಟ್ಟದ್ದರಿಂದಲೇ ಮಾನ ಪ್ರಭಾವಗಳನ್ನು ಹೊಂದಿದನು. ಆತನು ದೇವರ ಕೃಪೆಯಿಂದ ಎಲ್ಲರಿಗೋಸ್ಕರ ಮರಣವನ್ನು ಅನುಭವಿಸಲೇಬೇಕಾಗಿತ್ತು.
Kannada Bible (KNCL) BSI 2016
ದೇವದೂತರಿಗಿಂತ ಕೊಂಚಕಾಲವೇ ತುಸು ತಗ್ಗಿಸಲಾದ ಒಬ್ಬರನ್ನು, ಅಂದರೆ ಯೇಸುವನ್ನು ಮಾತ್ರ ನಾವು ಕಾಣುತ್ತೇವೆ. ಇವರು ಯಾತನಾ ಮರಣವನ್ನು ಅನುಭವಿಸಿದ್ದರಿಂದ ‘ಘನಗೌರವವನ್ನೂ ಸಿರಿಮಹಿಮೆಯನ್ನೂ ಮುಕುಟವಾಗಿ’ ಪಡೆದುದನ್ನು ನಾವು ಕಾಣುತ್ತೇವೆ. ದೈವಾನುಗ್ರಹದಿಂದ ಎಲ್ಲಾ ಮಾನವರ ಕಲ್ಯಾಣಕ್ಕಾಗಿ ಅವರು ಸಾವನ್ನು ಅನುಭವಿಸಬೇಕಾಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೂ ದೇವದೂತರಿಗಿಂತ ಸ್ವಲ್ಪಕಾಲ ಕಡಿಮೆಯಾಗಿ ಮಾಡಲಾದ ಆ ಒಬ್ಬಾತನು ಯೇಸುವೇ. ಈ ಯೇಸು ಬಾಧೆಪಟ್ಟು ಮೃತಪಟ್ಟಿದ್ದರಿಂದಲೇ ಮಹಿಮೆಯನ್ನೂ ಮಾನವನ್ನೂ ಕಿರೀಟವಾಗಿ ಹೊಂದಿದರೆಂದು ಎಂದು ನಾವು ಕಾಣುತ್ತೇವೆ. ದೇವರ ಕೃಪೆಯಿಂದಲೇ ಎಲ್ಲರಿಗೋಸ್ಕರ ಮರಣವನ್ನು ಈ ಯೇಸು ಅನುಭವಿಸಬೇಕಾಗಿತ್ತು.