Hebrews 3:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಒಬ್ಬರನ್ನೊಬ್ಬರು ಪ್ರತಿದಿನವೂ ಸಂತೈಸಿರಿ. “ಈ ದಿನ”ವು ಇನ್ನೂ ಇರುವಾಗಲೇ ಇದನ್ನೆಲ್ಲ ಮಾಡಿರಿ. ಪಾಪದಿಂದಾಗಲಿ ಪಾಪವು ಮೋಸಗೊಳಿಸುವ ರೀತಿಯಿಂದಾಗಲಿ ನಿಮ್ಮಲ್ಲಿ ಯಾರೂ ಕಠಿಣರಾಗದಂತೆ ಒಬ್ಬರಿಗೊಬ್ಬರು ಸಹಾಯ ಮಾಡಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮಲ್ಲಿ ಒಬ್ಬರಾದರೂ ಪಾಪದಲ್ಲಿ ಸಿಕ್ಕಿ ಮೋಸಹೋಗಿ ಕಠಿಣರಾಗದಂತೆ, ‘ಇಂದು’ ಎಂದು ಕರೆಯಲ್ಪಡುವ ಅವಕಾಶ ಇನ್ನೂ ಇರುವಾಗಲೇ, ಪ್ರತಿದಿನವೂ ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿರಿ.
Kannada BSI Bible 2016
ನಿಮ್ಮಲ್ಲಿ ಒಬ್ಬ ರಾದರೂ ಪಾಪದಿಂದ ಮೋಸಹೋಗಿ ಕಠಿಣರಾಗ ದಂತೆ--ಈ ದಿನ ಎಂದು ಕರೆಯಲ್ಪಡುವಾಗಲೇ ಪ್ರತಿ ನಿತ್ಯವೂ ಒಬ್ಬರನ್ನೊಬ್ಬರು ಎಚ್ಚರಿಸಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮಲ್ಲಿ ಒಬ್ಬರಾದರೂ ಪಾಪದಿಂದ ಮೋಸಹೋಗಿ ಕಠಿನರಾಗದಂತೆ ಈಹೊತ್ತು ಎಂಬ ಕಾಲವು ಇರುವ ತನಕ ಪ್ರತಿನಿತ್ಯವೂ ಒಬ್ಬರನ್ನೊಬ್ಬರು ಎಚ್ಚರಿಸಿರಿ.
Kannada Bible (KNCL) BSI 2016
ನಿಮ್ಮಲ್ಲಿ ಯಾರೂ ಪಾಪದಿಂದ ಮೋಸಹೋಗಿ ಕಠಿಣರಾಗದಂತೆ “ಇಂದು” ಎನ್ನುವ ಕಾಲವು ಇರುವ ತನಕ ಪ್ರತಿನಿತ್ಯವು ಒಬ್ಬರನ್ನೊಬ್ಬರು ಎಚ್ಚರಿಸಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮಲ್ಲಿ ಯಾರೂ ಪಾಪದಿಂದ ಮೋಸಹೋಗಿ ಕಠಿಣರಾಗದಂತೆ, “ಈ ಹೊತ್ತು” ಎಂಬುದು ಇರುವವರೆಗೆ ಪ್ರತಿದಿನವೂ ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿರಿ.