Hebrews 3:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾವೆಲ್ಲರೂ ಒಟ್ಟಾಗಿ ಕ್ರಿಸ್ತನಲ್ಲಿ ಪಾಲುಗಾರರಾಗಿದ್ದೇವೆ. ಆರಂಭದಲ್ಲಿ ನಮಗಿದ್ದ ದೃಢನಂಬಿಕೆಯನ್ನು ಅಂತ್ಯದವರೆಗೂ ಬಲವಾಗಿ ಹಿಡಿದುಕೊಳ್ಳುವುದಾದರೆ ಇದು ನಿಜವಾಗುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೊದಲಿನಿಂದಲೂ ಇರುವ ನಮ್ಮ ಭರವಸೆಯನ್ನು ಅಂತ್ಯದ ವರೆಗೂ ದೃಢವಾಗಿ ಹಿಡಿದುಕೊಳ್ಳುವುದಾದರೆ ನಾವು ಕ್ರಿಸ್ತನಲ್ಲಿ ಪಾಲುಗಾರರಾಗುತ್ತೇವೆ.
Kannada BSI Bible 2016
ಮೊದಲಿ ನಿಂದಿರುವ ನಮ್ಮ ಭರವಸವನ್ನು ಅಂತ್ಯದವರೆಗೂ ನಾವು ದೃಢವಾಗಿ ಹಿಡುಕೊಳ್ಳು ವದಾದರೆ ಕ್ರಿಸ್ತನಲ್ಲಿ ಪಾಲುಗಾರಾಗಿದ್ದೇವಲ್ಲಾ!
Kannada BSI JV (ಕನ್ನಡ ಸತ್ಯವೇದವು J.V. (BSI))
ಮೊದಲಿಂದಿರುವ ಭರವಸವನ್ನು ಅಂತ್ಯದವರೆಗೂ ದೃಢವಾಗಿ ಹಿಡಿದುಕೊಳ್ಳುವ ಪಕ್ಷಕ್ಕೆ ಕ್ರಿಸ್ತನಲ್ಲಿ ಪಾಲುಗಾರರಾಗಿದ್ದೇವಲ್ಲಾ!
Kannada Bible (KNCL) BSI 2016
ನಾವೆಲ್ಲರೂ ಕ್ರಿಸ್ತಯೇಸುವಿನೊಡನೆ ಸಹಬಾಧ್ಯರು; ಆದರೆ, ಪ್ರಾರಂಭದಲ್ಲಿ ನಮಗಿದ್ದ ನಂಬಿಕೆ-ನಿರೀಕ್ಷೆಯನ್ನು ಕೊನೆಯವರೆಗೂ ಸ್ಥಿರವಾಗಿ ಇರಿಸಿಕೊಳ್ಳಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೊದಲಿನಿಂದಿರುವ ನಮ್ಮ ನಿರೀಕ್ಷೆಯನ್ನು ಅಂತ್ಯದವರೆಗೂ ನಾವು ದೃಢವಾಗಿ ಹಿಡಿದುಕೊಳ್ಳುವುದಾದರೆ ಕ್ರಿಸ್ತ ಯೇಸುವಿನ ಭಾಗಿಗಳಾಗಿದ್ದೇವಲ್ಲಾ!