Hebrews 3:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ತನ್ನ ವಿಶ್ರಾಂತಿಯಲ್ಲಿ ಅವರು ಸೇರುವುದೇ ಇಲ್ಲವೆಂದು ದೇವರು ಪ್ರಮಾಣ ಮಾಡಿದಾಗ, ಆತನು ಯಾರೊಡನೆ ಮಾತಾಡುತ್ತಿದ್ದನು? ತನಗೆ ಅವಿಧೇಯರಾದ ಜನರ ಬಗ್ಗೆ ಅಲ್ಲವೇ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ವಿಶ್ರಾಂತಿಯಲ್ಲಿ ನೀವು ಸೇರುವುದೇ ಇಲ್ಲವೆಂದು ಯಾರನ್ನು ಕುರಿತು ಆತನು ಪ್ರಮಾಣಮಾಡಿದನೂ? ಅವಿಧೇಯರನ್ನು ಕುರಿತಲ್ಲವೇ?
Kannada BSI Bible 2016
ತನ್ನ ವಿಶ್ರಾಂತಿಯಲ್ಲಿ ಅವರು ಸೇರುವದೇ ಇಲ್ಲವೆಂದು ಯಾರನ್ನು ಕುರಿತು ಆತನು ಪ್ರಮಾಣಮಾಡಿದನು? ನಂಬದವರ ವಿಷಯ ವಾಗಿ ಅಲ್ಲವೇ?ಅವರು ಸೇರಲಾರದೆ ಹೋದದ್ದು ಅಪನಂಬಿಕೆಯಿಂದಲೇ ಎಂದು ತಿಳಿದುಕೊಳ್ಳುತ್ತೇವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರ ಶವಗಳು ಅರಣ್ಯದಲ್ಲಿ ಬಿದ್ದವಲ್ಲಾ. ನನ್ನ ವಿಶ್ರಾಂತಿಯಲ್ಲಿ ನೀವು ಸೇರುವದೇ ಇಲ್ಲವೆಂದು ಯಾರನ್ನು ಕುರಿತು ಪ್ರಮಾಣಮಾಡಿದನು? ಅವಿಧೇಯರನ್ನು ಕುರಿತಲ್ಲವೇ.
Kannada Bible (KNCL) BSI 2016
“ಸೇರರು ಎನ್ನ ವಿಶ್ರಾಂತಿಯ ನೆಲೆಯನು ಇವರೆಂದಿಗೂ” ಎಂದು ಯಾರನ್ನು ಕುರಿತು ಶಪಥ ಮಾಡಿದರು? ತಮಗೆ ಅವಿಧೇಯರಾದ ಜನರನ್ನು ಕುರಿತಲ್ಲವೇ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ವಿಶ್ರಾಂತಿಯಲ್ಲಿ ಅವರು ಸೇರುವುದೇ ಇಲ್ಲ!” ಎಂದು ಯಾರನ್ನು ಕುರಿತು ಅವರು ಪ್ರಮಾಣ ಮಾಡಿದರು, ಅವಿಧೇಯರಾದವರ ಕುರಿತಲ್ಲವೇ?