Hebrews 3:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕ್ರಿಸ್ತನಾದರೋ ಮಗನಾಗಿ ದೇವರ ಮನೆಯನ್ನು ಆಳುವುದರಲ್ಲಿ ನಂಬಿಗಸ್ತನಾಗಿದ್ದಾನೆ. ವಿಶ್ವಾಸಿಗಳಾದ ನಾವು ನಮಗಿರುವ ಮಹಾ ನಿರೀಕ್ಷೆಯಲ್ಲಿ ದೃಢವಾಗಿಯೂ ಹೆಮ್ಮೆಯಿಂದಲೂ ಇರುವುದಾಗಿದ್ದರೆ ದೇವರ ಮನೆಯವರಾಗಿದ್ದೇವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಕ್ರಿಸ್ತನಾದರೋ ಮಗನಾಗಿ ದೇವರ ಮನೆಯ ಮೇಲೆ ಅಧಿಕಾರಿಯಾಗಿದ್ದಾನೆ. ನಾವು ನಮ್ಮ ಭರವಸೆಯನ್ನೂ, ನಿರೀಕ್ಷೆಯ ಮಹತ್ವವನ್ನೂ, ಕಡೆ ತನಕ ಗಟ್ಟಿಯಾಗಿ ಹಿಡಿದುಕೊಂಡಿದ್ದರೆ ನಾವೇ ದೇವರ ಮನೆಯಾಗಿರುತ್ತೇವೆ.
Kannada BSI Bible 2016
ಕ್ರಿಸ್ತನಾದರೋ ಮಗನಾಗಿ ತನ್ನ ಸ್ವಂತ ಮನೆಯ ಮೇಲೆ ಅಧಿಕಾರಿಯಾಗಿದ್ದಾನೆ; ನಾವು ನಮ್ಮ ಧೈರ್ಯ ವನ್ನೂ ನಮ್ಮ ನಿರೀಕ್ಷೆಯಿಂದುಂಟಾಗುವ ಉತ್ಸಾಹವನ್ನೂ ಕಡೇತನಕ ದೃಢವಾಗಿ ಹಿಡುಕೊಂಡವರಾದರೆ ನಾವೇ ಆತನ ಮನೆಯಾಗಿದ್ದೇವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕ್ರಿಸ್ತನಾದರೋ ಮಗನಾಗಿ ದೇವರ ಮನೆಯ ಮೇಲೆ ಅಧಿಕಾರಿಯಾಗಿದ್ದಾನೆ; ನಾವು ನಮ್ಮ ಧೈರ್ಯವನ್ನೂ ನಮ್ಮ ನಿರೀಕ್ಷೆಯಿಂದುಂಟಾಗುವ ಉತ್ಸಾಹವನ್ನೂ ಕಡೇ ತನಕ ದೃಢವಾಗಿ ಹಿಡಿದುಕೊಂಡವರಾದರೆ ನಾವೇ ದೇವರ ಮನೆಯವರು.
Kannada Bible (KNCL) BSI 2016
ಕ್ರಿಸ್ತಯೇಸುವಾದರೋ, ದೇವರ ಮನೆಯಲ್ಲಿ ಅಧಿಕಾರ ಹೊಂದಿದ ಪ್ರಾಮಾಣಿಕ ಪುತ್ರನಾಗಿದ್ದಾರೆ. ನಾವು ನಿರೀಕ್ಷಿಸುತ್ತಿರುವ ಭಾಗ್ಯದ ಬಗ್ಗೆ ನಮಗಿರುವ ಶ್ರದ್ಧೆಯನ್ನೂ ಶೌರ್ಯವನ್ನೂ ಕಳೆದುಕೊಳ್ಳದೆ ದೃಢವಾಗಿದ್ದರೆ, ನಾವೇ ಅವರ ಮನೆಯಾಗಿರುತ್ತೇವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕ್ರಿಸ್ತ ಯೇಸುವಾದರೋ ಮಗನಾಗಿ ದೇವರ ಮನೆಯ ಮೇಲೆ ನಂಬಿಗಸ್ತರಾಗಿದ್ದಾರೆ. ಆದುದರಿಂದ ನಾವು ನಮ್ಮ ಧೈರ್ಯವನ್ನೂ ನಾವು ಹೊಗಳಿಕೊಳ್ಳುವ ನಿರೀಕ್ಷೆಯನ್ನೂ ಕಡೆಯತನಕ ದೃಢವಾಗಿ ಹಿಡಿದುಕೊಂಡಿದ್ದರೆ ನಾವೇ ದೇವರ ಮನೆಯಾಗಿರುತ್ತೇವೆ.