Hebrews 4:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರು ಆ ಜನರಿಗೆ ನೀಡಿದ ವಾಗ್ದಾನವು ನಮ್ಮಲ್ಲಿ ಇನ್ನೂ ಇದೆ. ನಾವು ದೇವರ ವಿಶ್ರಾಂತಿಯಲ್ಲಿ ಪ್ರವೇಶಿಸಬಹುದೆಂಬುದೇ ಆ ವಾಗ್ದಾನ. ಆದ್ದರಿಂದ ನಮ್ಮಲ್ಲಿ ಯಾರೂ ಆ ವಾಗ್ದಾನದ ಫಲವನ್ನು ಪಡೆಯುವದರಲ್ಲಿ ವಿಫಲರಾಗದಂತೆ ಬಹು ಎಚ್ಚರಿಕೆಯಿಂದಿರೋಣ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರಲಾಗಿ, ದೇವರ ವಿಶ್ರಾಂತಿಯಲ್ಲಿ ಸೇರಬಹುದೆಂಬ ವಾಗ್ದಾನ ಇನ್ನೂ ಇರುವುದರಿಂದ ನಿಮ್ಮಲ್ಲಿ ಯಾವನಾದರೂ ಅದರಿಂದ ತಪ್ಪಿಹೋಗದಂತೆ ನಾವು ಭಯಭಕ್ತಿಯಿಂದ ಇರೋಣ.
Kannada BSI Bible 2016
ಹೀಗಿರಲಾಗಿ ಆತನ ವಿಶ್ರಾಂತಿಯಲ್ಲಿ ಸೇರುವೆವೆಂಬ ವಾಗ್ದಾನವು ಇನ್ನೂ ಇರು ವಲ್ಲಿ ನಿಮ್ಮೊಳಗೆ ಯಾವನಾದರೂ ಆದರಿಂದ ತಪ್ಪುವವನಾದಾನೋ ಎಂದು ನಾವು ಭಯಪಡೋಣ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲಾಗಿ ದೇವರ ವಿಶ್ರಾಂತಿಯಲ್ಲಿ ಸೇರಬಹುದೆಂಬ ವಾಗ್ದಾನವು ಇನ್ನೂ ಇರುವಲ್ಲಿ ನಿಮ್ಮೊಳಗೆ ಯಾವನಾದರೂ ಆ ವಾಗ್ದಾನದ ಫಲವನ್ನು ಹೊಂದದೆ ತಪ್ಪುವವನಾದಾನೋ ಎಂದು ನಾವು ಭಯಪಡೋಣ.
Kannada Bible (KNCL) BSI 2016
ದೇವರು ತಮ್ಮ ವಿಶ್ರಾಂತಿಯ ನೆಲೆಯನ್ನು ನೀಡುವುದಾಗಿ ಮಾಡಿದ ವಾಗ್ದಾನ ಇನ್ನೂ ರದ್ದಾಗದೆ ಉಳಿದಿದೆ. ನಿಮ್ಮಲ್ಲಿ ಯಾರೂ ಆ ವಾಗ್ದಾನದ ಫಲವನ್ನು ಪಡೆಯದೆ ಇರಬಾರದು. ಎಂತಲೇ, ನಾವು ಭಯಭಕ್ತಿಯಿಂದ ಬಾಳೋಣ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗಿರಲಾಗಿ ದೇವರ ವಿಶ್ರಾಂತಿಯಲ್ಲಿ ಸೇರುವೆವು ಎಂಬ ವಾಗ್ದಾನವು ಇನ್ನೂ ಉಳಿದಿರಲು ನಿಮ್ಮಲ್ಲಿ ಯಾರಾದರೂ ಅದನ್ನು ಹೊಂದದೆ ಇರಬಾರದು ಎಂದು ಎಚ್ಚರವಹಿಸೋಣ.