Hebrews 4:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರ ವಿಶ್ರಾಂತಿಯಲ್ಲಿ ಪ್ರವೇಶಿಸಲು ನಮ್ಮಿಂದಾದಷ್ಟು ಪ್ರಯತ್ನಿಸೋಣ. ಆತನಿಗೆ ಅವಿಧೇಯರಾದ ಆ ಜನರನ್ನು ಅನುಸರಿಸಿ ನಮ್ಮಲ್ಲಿ ಯಾರೂ ವಿಫಲರಾಗದಂತೆ ನೋಡಿಕೊಳ್ಳೋಣ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದ್ದರಿಂದ ನಾವು ಈ ವಿಶ್ರಾಂತಿಯಲ್ಲಿ ಸೇರುವುದಕ್ಕೆ ಪ್ರಯತ್ನಿಸೋಣ. ನಮ್ಮಲ್ಲಿ ಒಬ್ಬರಾದರೂ ಅವರಂತೆ ಅವಿಧೇಯರಾಗಿ ಬಿದ್ದುಹೋಗದೆ ಇರೋಣ.
Kannada BSI Bible 2016
ಆದದರಿಂದ ನಾವು ಅವರ ಅಪನಂಬಿಕೆಯನ್ನು ಅನುಸರಿಸುವವ ರಾಗದಂತೆ ಆ ವಿಶ್ರಾಂತಿಯಲ್ಲಿ ಸೇರುವದಕ್ಕೆ ಪ್ರಯಾಸ ಪಡೋಣ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದದರಿಂದ ನಾವು ಆ ವಿಶ್ರಾಂತಿಯಲ್ಲಿ ಸೇರುವದಕ್ಕೆ ಪ್ರಯಾಸಪಡೋಣ; ನಮ್ಮಲ್ಲಿ ಒಬ್ಬರಾದರೂ ಅವರ ಅವಿಧೇಯತ್ವವನ್ನು ಅನುಸರಿಸುವವರಾಗಬಾರದು.
Kannada Bible (KNCL) BSI 2016
ಆದ್ದರಿಂದ ಈ ವಿಶ್ರಾಂತಿಯನ್ನು ಪಡೆಯಲು ನಾವು ಪ್ರಯತ್ನಪಡೋಣ. ನಮ್ಮಲ್ಲಿ ಯಾರೂ ಆ ಜನರಂತೆ ಅವಿಧೇಯತೆಯಿಂದ ವರ್ತಿಸಿ ವಿಶ್ವಾಸಭ್ರಷ್ಟರಾಗದೆ ಇರೋಣ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಈ ವಿಶ್ರಾಂತಿಯನ್ನು ಪಡೆಯಲು ನಾವು ಪ್ರಯತ್ನಿಸೋಣ. ನಮ್ಮಲ್ಲಿ ಯಾರೂ ಆ ಜನರ ಅವಿಧೇಯತೆಯನ್ನು ಅನುಸರಿಸಿ, ನಾಶರಾಗದೇ ಇರೋಣ.