Hebrews 4:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪರಲೋಕಕ್ಕೆ ಏರಿಹೋದ ಪ್ರಧಾನ ಯಾಜಕನೊಬ್ಬನು ನಮಗಿದ್ದಾನೆ. ಆತನೇ ದೇವರ ಮಗನಾದ ಯೇಸು. ಆದ್ದರಿಂದ ನಮಗಿರುವ ನಂಬಿಕೆಯಲ್ಲೇ ದೃಢವಾಗಿ ಸಾಗೋಣ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಕಾಶಗಳನ್ನು ದಾಟಿಹೋದ ದೇವಕುಮಾರನಾದ ಯೇಸುವೆಂಬ ಶ್ರೇಷ್ಠ ಮಹಾಯಾಜಕನು ನಮಗಿದ್ದಾನೆ. ಆದುದರಿಂದ ನಮಗಿರುವ ನಂಬಿಕೆಯನ್ನು ದೃಢವಾಗಿ ಹಿಡಿಯೋಣ.
Kannada BSI Bible 2016
ಆಕಾಶಗಳನ್ನು ದಾಟಿಹೋದ ದೇವಕುಮಾರ ನಾದ ಯೇಸುವೆಂಬ ಶ್ರೇಷ್ಠ ಮಹಾಯಾಜಕನು ನಮಗಿರುವದರಿಂದ ನಾವು ಮಾಡಿರುವ ಅರಿಕೆಯನ್ನು ಬಿಗಿಯಾಗಿ ಹಿಡಿಯೋಣ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಕಾಶಮಂಡಲಗಳನ್ನು ದಾಟಿಹೋದ ದೇವಕುಮಾರನಾದ ಯೇಸುವೆಂಬ ಶ್ರೇಷ್ಠ ಮಹಾಯಾಜಕನು ನಮಗಿರುವದರಿಂದ ನಾವು ಮಾಡಿರುವ ಪ್ರತಿಜ್ಞೆಯನ್ನು ಬಿಡದೆ ಹಿಡಿಯೋಣ.
Kannada Bible (KNCL) BSI 2016
ಸ್ವರ್ಗಲೋಕಕ್ಕೆ ಏರಿಹೋದ ದೇವರ ಪುತ್ರನಾದ ಯೇಸುವೇ ನಮಗೆ ಶ್ರೇಷ್ಠ ಹಾಗೂ ಪ್ರಧಾನಯಾಜಕ ಆಗಿರುವುದರಿಂದ ನಾವು ನಿವೇದಿಸುವ ವಿಶ್ವಾಸದಲ್ಲಿ ಸದೃಢರಾಗಿರೋಣ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಪರಲೋಕಗಳನ್ನು ದಾಟಿಹೋದ ದೇವಪುತ್ರ ಯೇಸು ಎಂಬ ಶ್ರೇಷ್ಠ ಮಹಾಯಾಜಕರು ನಮಗಿರುವುದರಿಂದ ನಾವು ಅರಿಕೆಮಾಡುವ ವಿಶ್ವಾಸವನ್ನು ಬಿಗಿಯಾಗಿ ಹಿಡಿಯೋಣ.