Hebrews 4:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಮ್ಮ ಪ್ರಧಾನ ಯಾಜಕನಾಗಿರುವ ಯೇಸು ನಮ್ಮ ದೌರ್ಬಲ್ಯವನ್ನು ಅರ್ಥಮಾಡಿಕೊಳ್ಳಲು ಸಮರ್ಥನಾಗಿದ್ದಾನೆ. ಆತನು ಈ ಲೋಕದಲ್ಲಿ ಜೀವಿಸಿದ್ದಾಗ, ಸರ್ವವಿಷಯಗಳಲ್ಲಿ ನಮ್ಮಂತೆಯೇ ಶೋಧನೆಗೆ ಗುರಿಯಾದರೂ ಪಾಪಮಾಡಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಕೆಂದರೆ ನಮಗಿರುವ ಮಹಾಯಾಜಕನು ನಮ್ಮ ಬಲಹೀನತೆಗಳಲ್ಲಿ ಅನುಕಂಪ ತೋರಿಸುವವನಾಗಿದ್ದಾನೆ. ಆತನು ಸರ್ವ ವಿಷಯಗಳಲ್ಲಿಯೂ ನಮ್ಮ ಹಾಗೆ ಶೋಧನೆಗೆ ಗುರಿಯಾದವನು, ಪಾಪ ಮಾತ್ರ ಮಾಡಲಿಲ್ಲವಷ್ಟೇ.
Kannada BSI Bible 2016
ಯಾಕಂದರೆ ನಮಗಿ ರುವ ಮಹಾಯಾಜಕನು ನಮ್ಮ ನಿರ್ಬಲಾವಸ್ಥೆಯನ್ನು ಕುರಿತು ಅನುತಾಪವಿಲ್ಲದವನಲ್ಲ; ಆತನು ಸರ್ವ ವಿಷಯಗಳಲ್ಲಿ ನಮ್ಮ ಹಾಗೆ ಶೋಧನೆಗೆ ಗುರಿ ಯಾದರೂ ಪಾಪರಹಿತನಾಗಿದ್ದನು.ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾ ಸಿಂಹಾಸನದ ಬಳಿಗೆ ಬರೋಣ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕಂದರೆ ನಮಗಿರುವ ಮಹಾಯಾಜಕನು ನಮ್ಮ ನಿರ್ಬಲಾವಸ್ಥೆಯನ್ನು ಕುರಿತು ಅನುತಾಪವಿಲ್ಲದವನಲ್ಲ; ಆತನು ಸರ್ವ ವಿಷಯಗಳಲ್ಲಿ ನಮ್ಮ ಹಾಗೆ ಶೋಧನೆಗೆ ಗುರಿಯಾದನು, ಪಾಪ ಮಾತ್ರ ಮಾಡಲಿಲ್ಲ.
Kannada Bible (KNCL) BSI 2016
ಈ ಪ್ರಧಾನಯಾಜಕ, ನಮ್ಮ ದೌರ್ಬಲ್ಯಗಳನ್ನು ಕಂಡು ಅನುಕಂಪ ತೋರದೆ ಇರುವವರಲ್ಲ. ಅವರು, ನಮ್ಮಂತೆಯೇ ಇದ್ದುಕೊಂಡು ಎಲ್ಲಾ ವಿಷಯಗಳಲ್ಲೂ ಶೋಧನೆ ಸಂಕಟಗಳನ್ನು ಅನುಭವಿಸಿದರು. ಆದರೆ ಪಾಪವನ್ನು ಮಾತ್ರ ಮಾಡಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಮಗಿರುವ ಮಹಾಯಾಜಕ ನಮ್ಮ ಬಲಹೀನತೆಗಳನ್ನು ಕುರಿತು ಅನುಕಂಪಗೊಳ್ಳದೆ ಇರುವವರಲ್ಲ. ಅವರು ಸರ್ವ ವಿಷಯಗಳಲ್ಲಿ ನಮ್ಮ ಹಾಗೆ ಶೋಧನೆಗೆ ಗುರಿಯಾದರೂ ಪಾಪ ಮಾತ್ರ ಮಾಡಲಿಲ್ಲ.