Hebrews 4:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ದೇವರ ಕೃಪಾಸಿಂಹಾಸನದ ಬಳಿಗೆ ಸಂಕೋಚಪಡದೆ ಬರೋಣ. ಕೊರತೆಯಲ್ಲಿರುವಾಗ ನಮಗೆ ಬೇಕಾದ ಸಹಾಯಕ್ಕಾಗಿ ಕೃಪೆಯನ್ನೂ ಕರುಣೆಯನ್ನೂ ಅಲ್ಲಿ ಹೊಂದಿಕೊಳ್ಳುವೆವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದುದರಿಂದ ನಾವು ತಕ್ಕ ಸಮಯದಲ್ಲಿ ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಆತನ ಕೃಪಾಸನದ ಮುಂದೆ ಬರೋಣ.
Kannada BSI Bible 2016
ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾ ಸಿಂಹಾಸನದ ಬಳಿಗೆ ಬರೋಣ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ದಯೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾಸನದ ಮುಂದೆ ಬರೋಣ.
Kannada Bible (KNCL) BSI 2016
ಆದಕಾರಣ, ನಾವು ಸಮಯೋಚಿತ ಸಹಾಯವನ್ನು ಅವರ ಅನುಗ್ರಹದಿಂದ ಪಡೆಯಲು ಮತ್ತು ಅವರ ಕರುಣೆಯನ್ನು ಸವಿಯಲು ಧೈರ್ಯದಿಂದ ಅವರ ಕೃಪಾಸನವನ್ನು ಸಮೀಪಿಸೋಣ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾವು ಕರುಣೆಯನ್ನು ಹೊಂದುವಂತೆಯೂ ತಕ್ಕ ಸಮಯದಲ್ಲಿ ಸಹಾಯ ಮಾಡುವ ಕೃಪೆಯನ್ನು ಪಡೆಯುವಂತೆಯೂ ಧೈರ್ಯದಿಂದ ಕೃಪಾಸನದ ಬಳಿಗೆ ಬರೋಣ.