Hebrews 4:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ರಕ್ಷಣಾಮಾರ್ಗದ ಕುರಿತು ಅವರಿಗೆ ತಿಳಿಸಲ್ಪಟ್ಟಂತೆಯೇ ನಮಗೂ ತಿಳಿಸಲಾಯಿತು. ಅವರು ಆ ಬೋಧನೆಯನ್ನು ಕೇಳಿದರೂ ಅವರಿಗೆ ಪ್ರಯೋಜನವಾಗಲಿಲ್ಲ. ಏಕೆಂದರೆ ಅವರು ಅದನ್ನು ನಂಬಿಕೆಯಿಂದ ಸ್ವೀಕರಿಸಿಕೊಳ್ಳಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲ್ಯರಿಗೆ ದೇವರ ವಿಶ್ರಾಂತಿಯ ಶುಭವರ್ತಮಾನವು ಸಾರೋಣವಾದಂತೆಯೇ ನಮಗೂ ಸಾರೋಣವಾಯಿತು. ಆದರೆ ಆ ಕಾಲದಲ್ಲಿ ಕೇಳಿದವರ ನಂಬಿಕೆಯೊಂದಿಗೆ ಇವರು ಪಾಲುಗಾರರಾಗದ ಕಾರಣ ಆ ಸಂದೇಶದಿಂದ ಅವರಿಗೆ ಪ್ರಯೋಜನವಾಗಲಿಲ್ಲ.
Kannada BSI Bible 2016
ಅವರಿಗೆ ಸುವಾರ್ತೆಯು ಸಾರೋಣವಾದಂತೆಯೇ ನಮಗೂ ಸಾರೋಣವಾಯಿತು; ಆದರೆ ಕೇಳಿದವರು ನಂಬಲಿಲ್ಲವಾದ ಕಾರಣ ಸಾರಿದ ಆ ವಾಕ್ಯದಿಂದ ಅವರಿಗೆ ಪ್ರಯೋಜನವಾಗಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರಿಗೆ ಶುಭವರ್ತಮಾನವು ಸಾರೋಣವಾದಂತೆಯೇ ನಮಗೂ ಸಾರೋಣವಾಯಿತು; ಆದರೆ ಆ ಕಾಲದಲ್ಲಿ ಕೇಳಿದವರು ನಂಬದೆಹೋದ ಕಾರಣ ಆ ವಾಕ್ಯದಿಂದ ಅವರಿಗೆ ಪ್ರಯೋಜನವಾಗಲಿಲ್ಲ.
Kannada Bible (KNCL) BSI 2016
ಶುಭವಾರ್ತೆಯನ್ನು ಅವರಿಗೆ ಸಾರಲಾದಂತೆ ನಮಗೂ ಸಾರಲಾಯಿತು. ಅವರು ಅದನ್ನು ಆಲಿಸಿದರು; ಆದರೆ ಅವರಲ್ಲಿ ವಿಶ್ವಾಸವಿರಲಿಲ್ಲ. ಈ ಕಾರಣ, ಅವರು ಕೇಳಿದ ಸಂದೇಶದಿಂದ ಫಲ ಪಡೆಯದೆ ಹೋದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲರಿಗೆ ಸುವಾರ್ತೆಯು ಸಾರೋಣವಾದಂತೆಯೇ ನಮಗೂ ಸಾರಿಹೇಳಲಾಯಿತು. ಆದರೆ ಕೇಳಿದವರು ವಿಧೇಯರಾದವರ ನಂಬಿಕೆಯಲ್ಲಿ ಭಾಗವಹಿಸದೇ ಹೋದದ್ದರಿಂದ, ಸಾರಿದ ವಾಕ್ಯವು ಅವರಿಗೆ ಪ್ರಯೋಜನವಾಗಲಿಲ್ಲ.