Hebrews 4:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಂಬುವವರಾದ ನಾವು ದೇವರ ವಿಶ್ರಾಂತಿಯಲ್ಲಿ ಸೇರಲು ಸಮರ್ಥರಾಗಿದ್ದೇವೆ. ದೇವರು ಹೇಳಿದಂತೆ:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈಗ ನಂಬುವವರಾದ ನಾವುಗಳೇ ಆ ವಿಶ್ರಾಂತಿಯಲ್ಲಿ ಸೇರುವವರು. ಏಕೆಂದರೆ ಲೋಕಾದಿಯಿಂದ ತನ್ನ ಸೃಷ್ಟಿಯ ಕಾರ್ಯಗಳು ಮುಗಿದುಹೋದಾಗ್ಯೂ “ಅವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲ ಎಂದು ನಾನು ಕೋಪದಿಂದ ಪ್ರಮಾಣ ಮಾಡಿದೆನು” ಎಂದು ಹೇಳಿದೆಯಲ್ಲಾ.
Kannada BSI Bible 2016
ಲೋಕದ ಅಸ್ತಿ ವಾರದೊಡನೆ (ಆತನ) ಕೆಲಸಗಳು ಮುಗಿದಿದ್ದರೂ ಆತನು--ಅವರು ನನ್ನ ವಿಶ್ರಾಂತಿಯಲ್ಲಿ ಸೇರುವದೇ ಇಲ್ಲವೆಂದು ನಾನು ಕೋಪದಿಂದ ಪ್ರಮಾಣಮಾಡಿ ದೆನು ಎಂದು ಹೇಳಿದನು. ನಂಬಿರುವ ನಾವೇ ಆ ವಿಶ್ರಾಂತಿಯಲ್ಲಿ ಪ್ರವೇಶಿಸುತ್ತೇವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರ ಕೆಲಸಗಳು ಲೋಕಾದಿಯಿಂದ ಮುಗಿದು ಹೋಗಿ [ಆತನ ವಿಶ್ರಾಂತಿಯು ಸಿದ್ಧವಾಗಿದ್ದರೂ] ಆತನು - ನನ್ನ ವಿಶ್ರಾಂತಿಯಲ್ಲಿ ಇವರು ಸೇರುವದೇ ಇಲ್ಲವೆಂದು ಕೋಪಗೊಂಡು ಪ್ರಮಾಣಮಾಡಿದೆನು ಎಂಬದಾಗಿ ಹೇಳಿದೆನಷ್ಟೆ. ನಂಬಿರುವ ನಾವಾದರೋ ಆ ವಿಶ್ರಾಂತಿಯಲ್ಲಿ ಸೇರುತ್ತಲೇ ಇದ್ದೇವೆ.
Kannada Bible (KNCL) BSI 2016
ಲೋಕಾದಿಯಲ್ಲೇ, ದೇವರು ತಮ್ಮ ಸೃಷ್ಟಿಕಾರ್ಯವನ್ನು ಮುಗಿಸಿದ್ದರೂ ಅವರು, “ಸೇರರು ಎನ್ನ ವಿಶ್ರಾಂತಿಯ ನೆಲೆಯನು ಇವರೆಂದಿಗೂ ಎಂದು ಸಿಟ್ಟುಗೊಂಡು ಶಪಥ ಮಾಡಿದೆನು,” ಎಂದು ಹೇಳಿದ್ದಾರೆ. ವಿಶ್ವಾಸಿಸುವ ನಾವಾದರೋ ಆ ವಿಶ್ರಾಂತಿಯ ನೆಲೆಯನ್ನು ಸೇರುತ್ತೇವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈಗ ದೇವರು ಹೇಳಿದಂತೆಯೇ ವಿಶ್ವಾಸದಲ್ಲಿರುವ ನಾವು ಆ ವಿಶ್ರಾಂತಿಯಲ್ಲಿ ಪ್ರವೇಶಿಸಿದೆವು, “ ‘ಅವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲ’ ಎಂದು ನಾನು ಕೋಪದಿಂದ ಪ್ರಮಾಣಮಾಡಿದೆನು,” ಆದರೂ ದೇವರ ಕೆಲಸವು ಜಗತ್ತಿನ ಸೃಷ್ಟಿಯ ಕಾರ್ಯದಿಂದಲೇ ಮುಗಿದಿದೆ.