Hebrews 4:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ಕೆಲವರು ದೇವರ ವಿಶ್ರಾಂತಿಯಲ್ಲಿ ಸೇರುತ್ತಾರೆಂಬುದು ಇನ್ನೂ ಖಚಿತವಾಗಿದೆ. ಆದರೆ ರಕ್ಷಣಾಮಾರ್ಗವನ್ನು ಮೊದಲು ಕೇಳಿದ ಜನರು ಪ್ರವೇಶಿಸಲಿಲ್ಲ. ಅವರು ವಿಧೇಯರಾಗದೆ ಇದ್ದುದರಿಂದ ಅವರು ಸೇರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದ್ದರಿಂದ, ಕೆಲವರು ದೇವರ ವಿಶ್ರಾಂತಿಯಲ್ಲಿ ಸೇರುವುದಕ್ಕೆ ದೇವರು ಇನ್ನೂ ಅನುಮತಿಸುವವನಾಗಿದ್ದಾನೆ. ಮೊದಲು ಶುಭವರ್ತಮಾನವನ್ನು ಕೇಳಿದವರು ಅವಿಧೇಯರಾದ ಕಾರಣ ಅದರಲ್ಲಿ ಸೇರದೆಹೋದರು.
Kannada BSI Bible 2016
ಆದದರಿಂದ ಕೆಲವರು ಅದರಲ್ಲಿ ಪ್ರವೇಶಿ ಸಲೇಬೇಕೆಂಬದು ಇನ್ನೂ ಇರುವದರಿಂದ ಯಾರಿಗೆ ಮೊದಲು ಅದು ಸಾರಲ್ಪಟ್ಟಿತೋ ಅವರು ಅಪ ನಂಬಿಕೆಯ ನಿಮಿತ್ತ ಒಳಗೆ ಪ್ರವೇಶಿಸಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲಾಗಿ ಆ ವಿಶ್ರಾಂತಿಯಲ್ಲಿ ಕೆಲವರು ಸೇರಬೇಕೆಂಬುವ ಮಾತು ಇನ್ನೂ ಇರುವದರಿಂದಲೂ ಮೊದಲು ಶುಭವರ್ತಮಾನವನ್ನು ಕೇಳಿದವರು ಅವಿಧೇಯರಾದ ಕಾರಣ ಅದರಲ್ಲಿ ಸೇರದೆಹೋದದ್ದರಿಂದಲೂ
Kannada Bible (KNCL) BSI 2016
ಆದುದರಿಂದ, ಈ ವಿಶ್ರಾಂತಿಯ ನೆಲೆಯನ್ನು ಸೇರುವ ಸಾಧ್ಯತೆ ಬೇರೆಯವರಿಗಾದರೂ ಇದೆ ಎಂಬುದು ಸ್ಪಷ್ಟವಾಗುತ್ತದೆ. ದೇವರ ವಾಕ್ಯವನ್ನು ಮೊದಲು ಕೇಳಿದವರಾದರೋ, ತಮ್ಮ ಅವಿಶ್ವಾಸದಿಂದ ಅದನ್ನು ಸೇರದೆಹೋದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಯಾರಿಗೆ ಮೊದಲು ಸುವಾರ್ತೆಯು ಸಾರಲಾಯಿತೋ ಅವರು ಅವಿಧೇಯತೆಯ ನಿಮಿತ್ತ ಆ ವಿಶ್ರಾಂತಿಯಲ್ಲಿ ಸೇರದೆಹೋದರು. ಆದರೂ ಕೆಲವರು ಆ ವಿಶ್ರಾಂತಿಯಲ್ಲಿ ಪ್ರವೇಶಿಸುವ ಅವಕಾಶ ಇನ್ನೂ ಇರುವುದರಿಂದ ಅವರು ಸೇರುವರು.