Hebrews 4:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಆತನು ಮತ್ತೊಂದು ವಿಶೇಷ ದಿನವನ್ನು ಯೋಜಿಸಿದನು. ಅದನ್ನು “ಈ ಹೊತ್ತು” ಎಂದು ಕರೆಯಲಾಗಿದೆ. ಆತನು ಆ ದಿನವನ್ನು ಕುರಿತು ಬಹುಕಾಲದ ನಂತರ ದಾವೀದನ ಮೂಲಕ ತಿಳಿಸಿದನು. ಪವಿತ್ರ ಗ್ರಂಥದ ಈ ಭಾಗವನ್ನು ನಾವು ಮೊದಲೊಮ್ಮೆ ನೋಡಿದೆವು:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪುನಃ ಬಹುಕಾಲದ ನಂತರ ಆತನು ದಾವೀದನ ಮೂಲಕ ‘ಈ ಹೊತ್ತೇ’ ಎಂದು ಬೇರೊಂದು ದಿನವನ್ನು ಗೊತ್ತುಮಾಡಿದ್ದಾನೆ. ಹೇಗೆಂದರೆ, “ನೀವು ಈ ಹೊತ್ತು ದೇವರ ಸ್ವರಕ್ಕೆ ಕಿವಿಗೊಡುವುದಾದರೆ, ನಿಮ್ಮ ಹೃದಯಗಳನ್ನು ಕಠಿಣ ಮಾಡಿಕೊಳ್ಳಬೇಡಿರಿ!” ಎಂದು ಹೇಳುತ್ತಾನಷ್ಟೆ.
Kannada BSI Bible 2016
ತಿರಿಗಿ ಬಹುಕಾಲ ಹೋದನಂತರ ಆತನು ದಾವೀದನ ಬಾಯಿಂದ ಮಾತನಾಡಿ--ಈ ಹೊತ್ತೇ ಎಂದು ಒಂದಾ ನೊಂದು ದಿವಸವನ್ನು ಗೊತ್ತುಮಾಡುತ್ತಾನೆ; ಹೇಗೆಂದರೆ--ನೀವು ಈ ಹೊತ್ತು ಆತನ ಧ್ವನಿಗೆ ಕಿವಿಗೊಟ್ಟರೆ ನಿಮ್ಮ ಹೃದಯಗಳನ್ನು ಕಠಿಣ ಮಾಡಿಕೊಳ್ಳಬೇಡಿರಿ ಎಂದು ಹೇಳುತ್ತಾನಷ್ಟೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಹುಕಾಲ ಹೋದನಂತರ ಆತನು ದಾವೀದನ ಬಾಯಿಂದ ಮಾತಾಡಿ ಈಹೊತ್ತೇ ಎಂದು ಒಂದಾನೊಂದು ದಿವಸವನ್ನು ಗೊತ್ತು ಮಾಡುತ್ತಾನೆ; ಹೇಗಂದರೆ - ನೀವು ಈಹೊತ್ತು ದೇವರ ಶಬ್ದಕ್ಕೆ ಕಿವಿಗೊಟ್ಟರೆ ನಿಮ್ಮ ಹೃದಯಗಳನ್ನು ಕಠಿನಮಾಡಿಕೊಳ್ಳಬೇಡಿರಿ ಎಂದು ಮೇಲ್ಕಂಡ ವಚನದಲ್ಲಿ ಹೇಳುತ್ತಾನಷ್ಟೆ.
Kannada Bible (KNCL) BSI 2016
ಈ ಕಾರಣದಿಂದಲೇ ದೇವರು, “ಇಂದು” ಎಂದು ಬೇರೊಂದು ದಿನವನ್ನು ಗೊತ್ತುಮಾಡುತ್ತಾರೆ. ಈ ದಿನವನ್ನು ಕುರಿತೇ ದೀರ್ಘಕಾಲದ ನಂತರ ದಾವೀದನ ಮುಖಾಂತರ: “ದೇವರ ದನಿಯನು ಕೇಳುವಿರಾದರೆ ನೀವಿಂದು ನಿಮ್ಮ ಪೂರ್ವಜರಂತೆ ಕಲ್ಲಾಗಿಸದಿರಿ ಹೃದಯವನು,” ಎಂದು ಹೇಳಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು “ಈ ಹೊತ್ತೇ” ಎಂದು ಬೇರೊಂದು ದಿವಸವನ್ನು ಗೊತ್ತು ಮಾಡುತ್ತಾರೆ. ಈ ದಿನವನ್ನು ಕುರಿತೇ ಬಹುಕಾಲದ ನಂತರ ದಾವೀದನ ಮೂಲಕ ಮೊದಲೇ ಹೀಗೆ ಹೇಳಿದ್ದಾರೆ: “ನೀವು ಈ ಹೊತ್ತು ದೇವರ ಸ್ವರಕ್ಕೆ ಕಿವಿಗೊಟ್ಟರೆ, ನಿಮ್ಮ ಹೃದಯಗಳನ್ನು ಕಠಿಣ ಮಾಡಿಕೊಳ್ಳಬೇಡಿರಿ.”