Hebrews 5:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪ್ರತಿಯೊಬ್ಬ ಯೆಹೂದ್ಯ ಪ್ರಧಾನಯಾಜಕನೂ ಮನುಷ್ಯರೊಳಗಿಂದ ಆರಿಸಲ್ಪಟ್ಟು ದೇವರಿಗೆ ಸಂಬಂಧಿಸಿದ ಕಾರ್ಯಗಳನ್ನು ಮನುಷ್ಯರಿಗೋಸ್ಕರ ಮಾಡಲು ನೇಮಿಸಲ್ಪಡುತ್ತಾನೆ. ಆ ಯಾಜಕನು ಪಾಪಗಳಿಗಾಗಿ ದೇವರಿಗೆ ಕಾಣಿಕೆಗಳನ್ನೂ ಯಜ್ಞಗಳನ್ನೂ ಅರ್ಪಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮನುಷ್ಯರೊಳಗಿಂದ ಪ್ರತಿಯೊಬ್ಬ ಮಹಾಯಾಜಕನೂ ಆರಿಸಲ್ಪಟ್ಟು ಮನುಷ್ಯರಿಗೋಸ್ಕರ ದೇವರ ಕಾರ್ಯಗಳನ್ನು ನಡೆಸುವುದಕ್ಕಾಗಿ ನೇಮಿಸಲಾಗಿದ್ದು. ಅವನು ಪಾಪಗಳ ನಿವಾರಣೆಗಾಗಿ ಕಾಣಿಕೆಗಳನ್ನು ಮತ್ತು ಯಜ್ಞಗಳನ್ನು ಸಮರ್ಪಿಸಬೇಕು.
Kannada BSI Bible 2016
ಪ್ರತಿಯೊಬ್ಬ ಮಹಾಯಾಜಕನು ಮನುಷ್ಯ ರೊಳಗಿಂದ ಆರಿಸಲ್ಪಟ್ಟು ಮನುಷ್ಯರಿ ಗೋಸ್ಕರ ದೇವರ ಕಾರ್ಯಗಳಿಗಾಗಿ ನೇಮಿಸಲ್ಪಡು ತ್ತಾನಲ್ಲಾ. ಅವನು ಕಾಣಿಕೆಗಳನ್ನೂ ಯಜ್ಞಗಳನ್ನೂ ಪಾಪಗಳಿಗೋಸ್ಕರ ಸಮರ್ಪಿಸಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪ್ರತಿಯೊಬ್ಬ ಮಹಾಯಾಜಕನು ಮನುಷ್ಯರೊಳಗಿಂದ ಆರಿಸಲ್ಪಟ್ಟವನಾಗಿದ್ದು ಮನುಷ್ಯರಿಗೋಸ್ಕರ ದೇವರ ಕಾರ್ಯಗಳನ್ನು ಜರಗಿಸುವದಕ್ಕಾಗಿ ನೇವಿುಸಲ್ಪಡುತ್ತಾನಲ್ಲಾ. ಅವನು ಅವರಿಗೋಸ್ಕರ ಕಾಣಿಕೆಗಳನ್ನೂ ಪಾಪನಿವಾರಣಕ್ಕಾಗಿ ಯಜ್ಞಗಳನ್ನೂ ಸಮರ್ಪಿಸಬೇಕು.
Kannada Bible (KNCL) BSI 2016
ಪ್ರತಿಯೊಬ್ಬ ಪ್ರಧಾನಯಾಜಕ ಜನರ ಮಧ್ಯದಿಂದ ಆರಿಸಲಾದವನು; ಜನರ ಪರವಾಗಿ ದೇವರ ಸನ್ನಿಧಿಯಲ್ಲಿ ಸೇವೆಸಲ್ಲಿಸಲು ಮತ್ತು ಪಾಪಪರಿಹಾರಕ್ಕಾಗಿ ಬಲಿಗಳನ್ನೂ ಕಾಣಿಕೆಗಳನ್ನೂ ಸಮರ್ಪಿಸಲು ನೇಮಕಗೊಂಡವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪ್ರತಿಯೊಬ್ಬ ಮಹಾಯಾಜಕ ಮನುಷ್ಯರೊಳಗಿಂದ ಆರಿಸಲಾಗಿ ಕಾಣಿಕೆಗಳನ್ನೂ ಯಜ್ಞಗಳನ್ನೂ ಪಾಪಗಳಿಗಾಗಿ ಸಮರ್ಪಿಸಲು ಮನುಷ್ಯರ ಪರವಾಗಿ ದೇವರ ಕಾರ್ಯಗಳಿಗಾಗಿ ನೇಮಿಸಲಾಗುತ್ತಾನಲ್ಲಾ.