Hebrews 5:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿಮಗೆ ಕಾಲವು ಬೇಕಾದಷ್ಟಿದ್ದುದರಿಂದ ಈಗಾಗಲೇ ನೀವು ಉಪದೇಶಕರಾಗಿರಬೇಕಿತ್ತು. (ಆದರೆ ನೀವಿನ್ನೂ ಆಗಿಲ್ಲ.) ಹೀಗಿರಲು ದೇವರ ಉಪದೇಶಗಳನ್ನು ಮೊದಲ ಪಾಠದಿಂದ ಮತ್ತೆ ಉಪದೇಶಿಸಲು ನಿಮಗೆ ಮತ್ತೊಬ್ಬ ವ್ಯಕ್ತಿಯ ಅಗತ್ಯವಿದೆ. ಹಾಲಿನಂತಿರುವ ಉಪದೇಶವನ್ನು ನಾವು ನಿಮಗೆ ಮಾಡಬೇಕಾಗಿದೆ. ನೀವು ಗಟ್ಟಿ ಆಹಾರವನ್ನು ತಿನ್ನುವವರಾಗಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಇಷ್ಟರೊಳಗೆ ಬೋಧಕರಾಗಿರಬೇಕಾಗಿದ್ದರೂ, ದೇವರ ವಾಕ್ಯಗಳ ಮೂಲಪಾಠಗಳನ್ನು ಒಬ್ಬನು ನಿಮಗೆ ಪುನಃ ಕಲಿಸಿಕೊಡಬೇಕಾಗಿದೆ. ನಿಮಗೆ ಇನ್ನೂ ಹಾಲಿನ ಅವಶ್ಯಕತೆಯಿದೆಯೇ ಹೊರತು ಗಟ್ಟಿಯಾದ ಆಹಾರವಲ್ಲ.
Kannada BSI Bible 2016
ನೀವು ಇಷ್ಟರೊಳಗೆ ಬೋಧಕರಾಗಿರ ಬೇಕಾಗಿದ್ದರೂ ಒಬ್ಬನು ನಿಮಗೆ ದೈವೋಕ್ತಿಗಳ ಮೂಲ ಪಾಠಗಳನ್ನು ತಿರಿಗಿ ಕಲಿಸಿಕೊಡಬೇಕಾಗಿದೆ; ನೀವು ಹಾಲು ಕುಡಿಯತಕ್ಕವರೇ ಹೊರತು ಗಟ್ಟಿಯಾದ ಆಹಾರವನ್ನು ತಿನ್ನತಕ್ಕವರಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಾಲವನ್ನು ನೋಡಿದರೆ ನೀವು ಇಷ್ಟರೊಳಗೆ ಬೋಧಕರಾಗಿರಬೇಕಾಗಿದ್ದರೂ ಒಬ್ಬನು ನಿಮಗೆ ದೈವೋಕ್ತಿಗಳ ಮೂಲಪಾಠಗಳನ್ನು ತಿರಿಗಿ ಕಲಿಸಿಕೊಡಬೇಕಾಗಿದೆ; ನೀವು ಹಾಲು ಕುಡಿಯತಕ್ಕವರೇ ಹೊರತು ಗಟ್ಟಿಯಾದ ಆಹಾರವನ್ನು ತಿನ್ನತಕ್ಕವರಲ್ಲ.
Kannada Bible (KNCL) BSI 2016
ಇಷ್ಟರೊಳಗೆ ನೀವು ಇತರರಿಗೆ ಬೋಧಿಸಲು ಶಕ್ತರಾಗಬೇಕಾಗಿತ್ತು; ಆದರೆ ದೇವರ ವಾಕ್ಯದ ಮೂಲ ಪಾಠಗಳನ್ನೇ ಇತರರು ನಿಮಗೆ ಮತ್ತೆ ಹೇಳಿಕೊಡಬೇಕಾಗಿದೆ. ಗಟ್ಟಿಯಾದ ಆಹಾರವನ್ನು ಉಣ್ಣುವ ಬದಲು ನೀವಿನ್ನೂ ಹಾಲನ್ನೇ ಕುಡಿಯಬೇಕಾಗಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಇಷ್ಟರೊಳಗೆ ಬೋಧಕರಾಗಿ ಇರಬೇಕಾಗಿತ್ತು. ಆದರೂ ನಿಮಗೆ ದೇವರ ವಾಕ್ಯಗಳ ಪ್ರಾಥಮಿಕ ಉಪದೇಶಗಳನ್ನೇ ಕಲಿಸಿಕೊಡಬೇಕಾಗಿದೆ. ನಿಮಗೆ ಹಾಲಿನ ಅವಶ್ಯಕತೆಯಿದೆಯೇ ಹೊರತು ಗಟ್ಟಿಯಾದ ಆಹಾರವಲ್ಲ.