Hebrews 5:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಗಟ್ಟಿಯಾದ ಆಹಾರವು ಜ್ಞಾನದಲ್ಲಿ ಬೆಳವಣಿಗೆ ಹೊಂದಿರುವವರಿಗೇ ಹೊರತು ಮಕ್ಕಳಿಗಲ್ಲ. ಇವರು ಅನುಭವದಿಂದ ತಮ್ಮ ಮನಸ್ಸುಗಳನ್ನು ಹಿಡಿತದಲ್ಲಿ ಇಟ್ಟುಕೊಂಡಿರುವುದರಿಂದ ಒಳಿತು ಕೆಡುಕುಗಳಿಗಿರುವ ಭೇದವನ್ನು ತಿಳಿದುಕೊಳ್ಳಬಲ್ಲವರಾಗಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗಟ್ಟಿಯಾದ ಆಹಾರವು ಪ್ರಾಯಸ್ಥರಿಗೋಸ್ಕರ, ಅಂದರೆ ತಪ್ಪು ಮತ್ತು ಸರಿಯಾದ್ದದನ್ನು ಗುರುತಿಸಲು, ಅಭ್ಯಾಸದ ಮೂಲಕ ನೈಪುಣ್ಯತೆಯನ್ನು ಹೊಂದಿದವರಿಗೋಸ್ಕರವಾಗಿದೆ.
Kannada BSI Bible 2016
ಆದರೆ ಗಟ್ಟಿಯಾದ ಆಹಾರವು ಪ್ರಾಯಸ್ಥರಿಗೊಸ್ಕರ ಅಂದರೆ ತಮ್ಮ ಜ್ಞಾನೇಂದ್ರಿ ಯಗಳನ್ನು ಸಾಧನೆಯಿಂದ ಶಿಕ್ಷಿಸಿಕೊಂಡು ಒಳ್ಳೇದನ್ನೂ ಕೆಟ್ಟದ್ದನ್ನೂ ತಿಳಿದವರಿಗೋಸ್ಕರವಾಗಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಗಟ್ಟಿಯಾದ ಆಹಾರವು ಪ್ರಾಯಸ್ಥರಿಗೋಸ್ಕರ ಅಂದರೆ ಜ್ಞಾನೇಂದ್ರಿಯಗಳನ್ನು ಸಾಧನೆಯಿಂದ ಶಿಕ್ಷಿಸಿಕೊಂಡು ಇದು ಒಳ್ಳೇದು ಅದು ಕೆಟ್ಟದ್ದು ಎಂಬ ಭೇದವನ್ನು ತಿಳಿದವರಿಗೋಸ್ಕರವಾಗಿದೆ.
Kannada Bible (KNCL) BSI 2016
ಗಟ್ಟಿಯಾದ ಆಹಾರ ಬೆಳೆದವರಿಗೆ; ಸ್ವಂತ ಅನುಭವದಿಂದ ಒಳ್ಳೆಯದಾವುದು ಕೆಟ್ಟದ್ದಾವುದು ಎಂದು ಅರಿತುಕೊಳ್ಳಬಲ್ಲವರಿಗೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಗಟ್ಟಿಯಾದ ಆಹಾರವು, ತಮ್ಮ ಜ್ಞಾನೇಂದ್ರಿಯಗಳನ್ನು ಅಭ್ಯಾಸಿಸಿ, ತರಬೇತುಗೊಂಡದ್ದರಿಂದ ಒಳ್ಳೆಯದನ್ನು ಹಾಗೂ ಕೆಟ್ಟದ್ದನ್ನು ವಿವೇಚಿಸಿ ಪೂರ್ಣ ಬೆಳವಣಿಗೆ ಹೊಂದಿದವರಿಗೆ ಸೇರಿದ್ದಾಗಿದೆ.