Hebrews 5:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪ್ರಧಾನಯಾಜಕನಾಗಿ ನೇಮಿಸಲ್ಪಡುವುದು ಒಂದು ಗೌರವ. ಆದರೆ ಯಾರೂ ತಮ್ಮನ್ನು ತಾವೇ ಈ ಕಾರ್ಯಕ್ಕೆ ಆರಿಸಿಕೊಳ್ಳುವುದಿಲ್ಲ. ದೇವರು ಆರೋನನನ್ನು ಕರೆದಂತೆ, ಆ ವ್ಯಕ್ತಿಯನ್ನು ಕರೆಯಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾವನೂ ತನ್ನಷ್ಟಕ್ಕೆ ತಾನೇ ಈ ಗೌರವ ಪದವಿಯನ್ನು ವಹಿಸಿಕೊಳ್ಳುವುದಕ್ಕಾಗುವುದಿಲ್ಲ, ಆದರೆ ಆರೋನನಂತೆ ದೇವರಿಂದ ಕರೆಯಲ್ಪಟ್ಟು ವಹಿಸಿಕೊಳ್ಳುತ್ತಾನೆ.
Kannada BSI Bible 2016
ಇದಲ್ಲದೆ ಯಾವನೂ ತನ್ನಷ್ಟಕ್ಕೆ ತಾನೇ ಈ ಗೌರವವನ್ನು ವಹಿಸಿಕೊಳ್ಳದೆ ಆರೋನನಂತೆ ದೇವರಿಂದ ಕರೆಯಲ್ಪಟ್ಟು ವಹಿಸಿಕೊಳ್ಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಯಾವನೂ ತನ್ನಷ್ಟಕ್ಕೆ ತಾನೇ ಈ ಗೌರವವನ್ನು ವಹಿಸಿಕೊಳ್ಳದೆ ದೇವರಿಂದ ನೇವಿುಸಲ್ಪಟ್ಟು ವಹಿಸಿಕೊಳ್ಳುತ್ತಾನೆ; ಆರೋನನು ಸಹ ದೇವರಿಂದಲೇ ನೇವಿುಸಲ್ಪಟ್ಟು ಆ ಗೌರವವನ್ನು ವಹಿಸಿಕೊಂಡನಲ್ಲಾ.
Kannada Bible (KNCL) BSI 2016
ಅಲ್ಲದೆ, ಪ್ರಧಾನಯಾಜಕನೆಂಬ ಗೌರವಪದವಿಯನ್ನು ತನ್ನಷ್ಟಕ್ಕೆ ತಾನೇ ಯಾರೂ ವಹಿಸಿಕೊಳ್ಳರು. ಆರೋನನಂತೆ ಅವರೂ ದೇವರಿಂದ ಕರೆ ಹೊಂದಿದವರಾಗಿರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆರೋನನಂತೆ ದೇವರಿಂದ ಕರೆ ಹೊಂದದ ಹೊರತು ಯಾವನೂ ತನ್ನಷ್ಟಕ್ಕೆ ತಾನೇ ಈ ಗೌರವ ಪದವಿಯನ್ನು ವಹಿಸಿಕೊಳ್ಳಲಾರನು.