Hebrews 5:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕ್ರಿಸ್ತನು ಭೂಲೋಕದಲ್ಲಿ ಜೀವಿಸಿದ್ದಾಗ, ದೇವರಲ್ಲಿ ಪ್ರಾರ್ಥಿಸಿ, ಸಹಾಯವನ್ನು ಬೇಡಿದನು. ಆತನನ್ನು ಸಾವಿನಿಂದ ರಕ್ಷಿಸುವ ಶಕ್ತಿ ದೇವರೊಬ್ಬನಿಗೇ ಇತ್ತು. ಆದ್ದರಿಂದ ಆತನು ಗಟ್ಟಿಯಾಗಿ ರೋದಿಸುತ್ತಾ ಕಣ್ಣೀರು ಸುರಿಸುತ್ತಾ ದೇವರಲ್ಲಿ ಪ್ರಾರ್ಥಿಸಿದನು. ದೇವರ ಇಷ್ಟದಂತೆ ಆತನು ಎಲ್ಲವನ್ನೂ ಮಾಡಿದವನಾಗಿದ್ದನು ಮತ್ತು ದೀನಭಾವವನ್ನು ಹೊಂದಿದ್ದನು. ಆದ್ದರಿಂದ ದೇವರು ಆತನ ಪ್ರಾರ್ಥನೆಗಳಿಗೆ ಉತ್ತರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕ್ರಿಸ್ತನು ತಾನೇ ಭೂಲೋಕದಲ್ಲಿ ಮನುಷ್ಯನಾಗಿ ಜೀವಿಸಿದ್ದ ಕಾಲದಲ್ಲಿ, ಮರಣದಿಂದ ತಪ್ಪಿಸಿ ಕಾಪಾಡಲು ಶಕ್ತನಾಗಿರುವಾತನಿಗೆ ಗಟ್ಟಿಯಾಗಿ ಮೊರೆಯಿಡುತ್ತಾ, ಕಣ್ಣೀರನ್ನು ಸುರಿಸುತ್ತಾ, ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿದನು. ದೇವರ ಮೇಲಣ ಭಯಭಕ್ತಿಯ ನಿಮಿತ್ತ ಆತನ ಪ್ರಾರ್ಥನೆಯನ್ನು ದೇವರು ಕೇಳಿದನು.
Kannada BSI Bible 2016
ಆತನು ತನ್ನ ಶರೀರದ ದಿನಗಳಲ್ಲಿ ಮರಣದಿಂದ ತಪ್ಪಿಸಲು ಶಕ್ತನಾಗಿರುವಾತನಿಗೆ ಬಲ ವಾಗಿ ಕೂಗುತ್ತಾ ಕಣ್ಣೀರನ್ನು ಸುರಿಸುತ್ತಾ ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿ ಭಯಪಟ್ಟದ್ದರಲ್ಲಿ ಕೇಳಲ್ಪ ಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕ್ರಿಸ್ತನು ತಾನು ಭೂಲೋಕದಲ್ಲಿದ್ದಾಗ ಮರಣಕ್ಕೆ ತಪ್ಪಿಸಿ ಕಾಪಾಡ ಶಕ್ತನಾಗಿರುವಾತನಿಗೆ ಬಲವಾಗಿ ಕೂಗುತ್ತಾ ಕಣ್ಣೀರನ್ನು ಸುರಿಸುತ್ತಾ ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿ ದೇವರ ಮೇಲಣ ಭಯಭಕ್ತಿಯ ನಿವಿುತ್ತ ಕೇಳಲ್ಪಟ್ಟನು.
Kannada Bible (KNCL) BSI 2016
ಕ್ರಿಸ್ತಯೇಸು ಈ ಭೂಲೋಕದಲ್ಲಿದ್ದಾಗ, ತಮ್ಮನ್ನು ಮರಣದಿಂದ ಕಾಪಾಡಲು‍ ಶಕ್ತರಾದ ದೇವರನ್ನು ಉಚ್ಚಸ್ವರದಿಂದ ಕೂಗುತ್ತಾ ಕಣ್ಣೀರಿಡುತ್ತಾ ವಿನಂತಿಸಿ ಪ್ರಾರ್ಥಿಸಿದರು. ಅವರ ಭಯಭಕ್ತಿಯನ್ನು ನೋಡಿ ದೇವರು ಅವರ ಮೊರೆಯನ್ನು ಆಲಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕ್ರಿಸ್ತ ಯೇಸುವು ಭೂಲೋಕದ ದಿನಗಳಲ್ಲಿ ಮರಣದಿಂದ ತಪ್ಪಿಸಲು ಶಕ್ತರಾಗಿರುವ ದೇವರಿಗೆ ಬಲವಾಗಿ ಕೂಗುತ್ತಾ ಕಣ್ಣೀರಿಟ್ಟರು. ಯೇಸುವಿನ ಭಯಭಕ್ತಿಯ ನಿಮಿತ್ತ ಅವರ ಪ್ರಾರ್ಥನೆ, ವಿಜ್ಞಾಪನೆಗಳಿಗೆ ಉತ್ತರ ಸಿಕ್ಕಿತ್ತು.