Hebrews 6:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರು ಅಬ್ರಹಾಮನಿಗೆ ಒಂದು ವಾಗ್ದಾನ ಮಾಡಿದನು. ದೇವರಿಗಿಂತ ದೊಡ್ಡವನಿಲ್ಲ. ಆದ್ದರಿಂದ, ದೇವರು ತನ್ನ ಮೇಲೆಯೇ ಆಣೆಯಿಟ್ಟು ತನ್ನ ಮಾತಿನಂತೆಯೇ ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದಾಗ ತನಗಿಂತಲೂ ಹೆಚ್ಚಿನವರು ಯಾರೂ ಇಲ್ಲದ್ದರಿಂದ ತನ್ನ ಮೇಲೆ ಆಣೆಯಿಟ್ಟು,
Kannada BSI Bible 2016
ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದಾಗ ತನಗಿಂತ ಹೆಚ್ಚಿನವನ ಆಣೆಯಿಡುವದಕ್ಕಾಗದೆ ಇದ್ದದ್ದರಿಂದ ತನ್ನಾ ಣೆಯಿಟ್ಟು--
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರು ಅಬ್ರಹಾಮನಿಗೆ ವಾಗ್ದಾನಮಾಡಿದಾಗ ತನಗಿಂತ ಹೆಚ್ಚಿನವನ ಆಣೆಯಿಡುವದಕ್ಕಾಗದೆ ಇದ್ದದರಿಂದ ತನ್ನಾಣೆಯಿಟ್ಟು -
Kannada Bible (KNCL) BSI 2016
ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದಾಗ ತಮ್ಮ ಮಾತನ್ನು ಈಡೇರಿಸುವುದಾಗಿ ಶಪಥಮಾಡಿದರು. ತಮಗಿಂತಲೂ ಮೇಲಾದವರಾರೂ ಇಲ್ಲವಾದ ಕಾರಣ ತಮ್ಮ ಸ್ವಂತ ಹೆಸರಿನಲ್ಲೇ ಶಪಥಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದಾಗ ತಮಗಿಂತಲೂ ಹೆಚ್ಚು ದೊಡ್ಡವರಾರೂ ಇಲ್ಲದ್ದರಿಂದ ತಮ್ಮ ಮೇಲೆ ಆಣೆಯಿಟ್ಟು,