Hebrews 6:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆತನು ಅವನಿಗೆ, “ನಾನು ನಿಜವಾಗಿಯೂ ನಿನ್ನನ್ನು ಆಶೀರ್ವದಿಸುತ್ತೇನೆ. ಅನೇಕಾನೇಕ ಸಂತತಿಗಳನ್ನು ನಿನಗೆ ದಯಪಾಲಿಸುವೆನು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಖಂಡಿತವಾಗಿಯೂ ನಾನು ನಿನ್ನನ್ನು ಆಶೀರ್ವದಿಸುವೆನು. ನಿನ್ನ ಸಂತಾನವನ್ನು ಅಭಿವೃದ್ಧಿಪಡಿಸುವೆನು” ಎಂದು ಹೇಳಿದನಷ್ಟೆ.
Kannada BSI Bible 2016
ಖಂಡಿತವಾಗಿ ನಿನ್ನನ್ನು ಆಶೀರ್ವದಿಸೇ ಆಶೀರ್ವದಿಸುವೇನು. ನಿನ್ನನ್ನು ಹೆಚ್ಚಿಸೇ ಹೆಚ್ಚಿಸುವೆನು ಎಂದು ಹೇಳಿದನಷ್ಟೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಜವಾಗಿ ನಿನ್ನನ್ನು ಆಶೀರ್ವದಿಸೇ ಆಶೀರ್ವದಿಸುವೆನು, ನಿನ್ನನ್ನು ಹೆಚ್ಚಿಸೇ ಹೆಚ್ಚಿಸುವೆನು ಎಂದು ಹೇಳಿದನಷ್ಟೆ.
Kannada Bible (KNCL) BSI 2016
“ಖಂಡಿತವಾಗಿಯೂ ನಾನು ನಿನ್ನನ್ನು ಆಶೀರ್ವದಿಸುವೆನು; ನಿನ್ನ ಸಂತಾನವನ್ನು ಹೆಚ್ಚಿಸಿಯೇ ತೀರುವೆನು,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಿಶ್ಚಯವಾಗಿ ನಾನು ನಿನ್ನನ್ನು ಆಶೀರ್ವದಿಸೇ ಆಶೀರ್ವದಿಸುವೆನು, ನಿನ್ನ ಸಂತಾನವನ್ನು ಹೆಚ್ಚಿಸೇ ಹೆಚ್ಚಿಸುವೆನು,” ಎಂದು ಹೇಳಿದರಷ್ಟೆ.