Hebrews 6:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜನರು ವಾಗ್ದಾನ ಮಾಡುವಾಗ ಯಾವಾಗಲೂ ತಮಗಿಂತ ದೊಡ್ಡವರಾದ ಯಾರಾದರೊಬ್ಬರನ್ನು ಬಳಸಿಕೊಳ್ಳುತ್ತಾರೆ. ಅವರು ಹೇಳಿದ್ದು ನಿಜವೆಂಬುದನ್ನು ಆ ವಾಗ್ದಾನವು ಶ್ರುತಪಡಿಸುತ್ತದೆ. ಇದರಿಂದಾಗಿ ಅವರ ಎಲ್ಲಾ ವಾಗ್ವಾದಗಳಿಗೆ ಕೊನೆಯಾಗುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮನುಷ್ಯರು ತಮಗಿಂತಲೂ ಹೆಚ್ಚಿನವನ ಮೇಲೆ ಆಣೆಯಿಡುತ್ತಾರಷ್ಟೆ, ಆಣೆಯನ್ನು ದೃಢಪಡಿಸಿದ ಮೇಲೆ ವಿವಾದವು ಅಂತ್ಯವಾಗುವುದು.
Kannada BSI Bible 2016
ಮನುಷ್ಯರು ನಿಜವಾಗಿಯೂ ತಮಗಿಂತ ಹೆಚ್ಚಿನವನ ಆಣೆಯಿಡು ತ್ತಾರಷ್ಟೆ; ಆಣೆಯನ್ನು ಸ್ಥಿರಪಡಿಸಿದ ಮೇಲೆ ಅವರೊಳಗೆ ವಿವಾದವೇನೂ ಇರುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮನುಷ್ಯರು ತಮಗಿಂತ ಹೆಚ್ಚಿನವನ ಆಣೆಯಿಡುತ್ತಾರಷ್ಟೆ; ಮಾತಿಗೆ ಆಣೆಯಿಟ್ಟು ಸ್ಥಿರಪಡಿಸಿದ ಮೇಲೆ ಅವರೊಳಗೆ ವಿವಾದವೇನೂ ಇರುವದಿಲ್ಲ.
Kannada Bible (KNCL) BSI 2016
ಮನುಷ್ಯರು ತಮಗಿಂತಲೂ ಹೆಚ್ಚಿನವರ ಮೇಲೆ ಆಣೆಯಿಡುವುದು ವಾಡಿಕೆ. ಹೀಗೆ ಆಣೆಯಿಟ್ಟು ಪ್ರಮಾಣಮಾಡಿದರೆ ಎಲ್ಲ ವಿವಾದಗಳು ಕೊನೆಗೊಳ್ಳುತ್ತವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮನುಷ್ಯರು ನಿಜವಾಗಿಯೂ ದೊಡ್ಡವರ ಮೇಲೆ ಆಣೆ ಇಡುತ್ತಾರಷ್ಟೆ. ಆಣೆಯನ್ನು ದೃಢಪಡಿಸುವುದು ಪ್ರತಿಯೊಂದು ವಿವಾದಕ್ಕೂ ಅಂತ್ಯವಾಗಿರುವುದು.