Hebrews 6:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹಾಗೆಯೇ ದೇವರು ತನ್ನ ವಾಗ್ದಾನವನ್ನು ಬಾಧ್ಯವಾಗಿ ಪಡೆಯುವ ಜನರಿಗೆ ತನ್ನ ಸಂಕಲ್ಪವು ಸ್ಥಿರವಾದದ್ದು ಎಂಬುದನ್ನು ಸ್ಪಷ್ಟಪಡಿಸಲು ಆಣೆಯಿಟ್ಟು ನಿಶ್ಚಯಪಡಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಾಗೆಯೇ ದೇವರು ತನ್ನ ಸಂಕಲ್ಪವು ಬದಲಾಗಲಾರದ್ದೆಂಬುದನ್ನು, ವಾಗ್ದಾನದ ಬಾಧ್ಯಸ್ಥರಿಗೆ ಬಹು ಸ್ಪಷ್ಟವಾಗಿ ತೋರಿಸಬೇಕೆಂದು ಆಣೆಯಿಟ್ಟು ಸ್ಥಿರಪಡಿಸಿದನು.
Kannada BSI Bible 2016
ಅದರಲ್ಲಿ ದೇವರು ತನ್ನ ಸಂಕಲ್ಪವು ನಿಶ್ಚಲವಾದದ್ದೆಂಬದನ್ನು ವಾಗ್ದಾನಕ್ಕೆ ಬಾಧ್ಯರಾಗುವವರಿಗೆ ಬಹು ಸ್ಪಷ್ಟವಾಗಿ ತೋರಿಸ ಬೇಕೆಂದು ಆಣೆಯಿಟ್ಟು ತನ್ನ ಮಾತನ್ನು ಸ್ಥಿರಪಡಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಾಗೆಯೇ ದೇವರು ತನ್ನ ಸಂಕಲ್ಪವು ನಿಶ್ಚಲವಾದದ್ದೆಂಬದನ್ನು ವಾಗ್ದಾನದ ಫಲಕ್ಕೆ ಬಾಧ್ಯರಾಗುವವರಿಗೆ ಬಹು ಸ್ಪಷ್ಟವಾಗಿ ತೋರಿಸಬೇಕೆಂದು ಆಣೆಯಿಟ್ಟು ತನ್ನ ಮಾತನ್ನು ಸ್ಥಿರಪಡಿಸಿದನು.
Kannada Bible (KNCL) BSI 2016
ಹಾಗೆಯೇ, ದೇವರು ತಮ್ಮ ವಾಗ್ದಾನವನ್ನು ಬಾಧ್ಯವಾಗಿ ಪಡೆಯುವವರಿಗೆ ತಮ್ಮ ಸಂಕಲ್ಪ ಅಚಲವಾದುದು ಎಂಬುದನ್ನು ಸ್ಪಷ್ಟಪಡಿಸಲು, ಶಪಥಮಾಡಿ ಸ್ಥಿರಪಡಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ತಮ್ಮ ಮಾರ್ಪಡದ ಉದ್ದೇಶವನ್ನು ವಾಗ್ದಾನದ ಬಾಧ್ಯಸ್ಥರಿಗೆ ಇನ್ನೂ ಹೆಚ್ಚಾಗಿಯೇ ತೋರಿಸಬೇಕೆಂದು ಆಣೆಯಿಟ್ಟು ಸ್ಥಿರಪಡಿಸಿದರು.