Hebrews 6:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈ ನಿರೀಕ್ಷೆಯು ನಮ್ಮ ಆತ್ಮಗಳನ್ನು ಅಪಾಯದಲ್ಲಿ ಕೊಚ್ಚಿಕೊಂಡು ಹೋಗದಂತೆ ಕಾಪಾಡುವ ಬಲವಾದ ಸ್ಥಿರವಾದ ಲಂಗರಿನಂತಿದೆ. ಅದು ಸ್ವರ್ಗದಾಲಯದ ತೆರೆಯ ಮರೆಯಲ್ಲಿರುವ ಮಹಾ ಪವಿತ್ರಸ್ಥಳದ ಒಳಕ್ಕೆ ಪ್ರವೇಶಿಸುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ನಿರೀಕ್ಷೆಯು ನಮ್ಮ ಪ್ರಾಣಕ್ಕೆ ವಿಶ್ವಾಸಾರ್ಹವಾದದ್ದೂ ಸ್ಥಿರವಾದದ್ದೂ ಆದ ಲಂಗರವಾಗಿದೆ. ಅದು ಅತಿ ಪರಿಶುದ್ಧ ಸ್ಥಳದ ತೆರೆಯ ಒಳಗಡೆ ಪ್ರವೇಶಿಸುವಂಥದ್ದಾಗಿದೆ.
Kannada BSI Bible 2016
ಆ ನಿರೀಕ್ಷೆಯು ನಮ್ಮ ಪ್ರಾಣಕ್ಕೆ ಲಂಗರದ ಹಾಗಿದ್ದು ಖಂಡಿತವಾದದ್ದೂ ಸ್ಥಿರವಾದದ್ದೂ ಆಗಿದೆ. ಅದು ತೆರೆಯೊಳಗಿರುವಲ್ಲಿಗೆ ಪ್ರವೇಶಿಸುವಂಥದು.ಯೇಸು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿ ಮಾಡಲ್ಪಟ್ಟು ನಮಗೋಸ್ಕರ ಮುಂದಾಗಿ ಅದರೊಳಗೆ ಪ್ರವೇಶಿಸಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಆಧಾರಗಳನ್ನು ಕೊಟ್ಟದ್ದರಲ್ಲಿ ದೇವರು ಸುಳ್ಳಾಡಿರಲಾರನು. ಆ ನಿರೀಕ್ಷೆಯು ನಮ್ಮ ಪ್ರಾಣಕ್ಕೆ ಲಂಗರದ ಹಾಗಿದ್ದು ಭರವಸಕ್ಕೆ ಯೋಗ್ಯವಾದದ್ದೂ ಸ್ಥಿರವಾದದ್ದೂ ಆಗಿದೆ. ಅದು ತೆರೆಯೊಳಗಣ ದೇವಸಾನ್ನಿಧ್ಯವನ್ನು ಪ್ರವೇಶಿಸುವಂಥದು.
Kannada Bible (KNCL) BSI 2016
ಈ ನಂಬಿಕೆ, ನಿರೀಕ್ಷೆ, ನಮ್ಮ ಬಾಳನೌಕೆಯ ಸ್ಥಿರವಾದ ಹಾಗೂ ಸುರಕ್ಷಿತವಾದ ಲಂಗರಿನಂತಿದೆ. ಇದು ತೆರೆಯ ಹಿಂದಿರುವ ಸ್ವರ್ಗೀಯ ಗರ್ಭಗುಡಿಯನ್ನು ಪ್ರವೇಶಿಸುವಂಥದ್ದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ನಿರೀಕ್ಷೆಯು ನಮ್ಮ ಆತ್ಮಕ್ಕೆ ನಿಶ್ಚಯವಾದದ್ದೂ ಸ್ಥಿರವಾದದ್ದೂ ಆಗಿರುವ ಲಂಗರದ ಹಾಗಿದೆ. ಅದು ಅತಿ ಪರಿಶುದ್ಧಸ್ಥಳದ ತೆರೆಯ ಒಳಗಡೆ ಪ್ರವೇಶಿಸುವಂಥದ್ದೂ ಆಗಿದೆ.