Hebrews 6:2 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಸಮಯದಲ್ಲಿ ನಮಗೆ ದೀಕ್ಷಾಸ್ನಾನ, ಹಸ್ತಾರ್ಪಣ, ಸತ್ತವರ ಪುನರುತ್ಥಾನ ಮತ್ತು ನಿತ್ಯವಾದ ನ್ಯಾಯತೀರ್ಪು ಇವುಗಳನ್ನು ಕುರಿತು ಬೋಧಿಸಲಾಯಿತು. ಆದರೆ ಈಗ ನಾವು ಪೂರ್ಣ ತಿಳುವಳಿಕೆಗೆ ಹೋಗುವುದು ಅಗತ್ಯವಾಗಿದೆ.
Kannada BSI Bible 2016
ಬಾಪ್ತಿಸ್ಮಗಳ ಬೋಧನೆಯೂ ಹಸ್ತಾ ರ್ಪಣೆಯೂ ಸತ್ತವರ ಪುನರುತ್ಥಾನವೂ ನಿತ್ಯವಾದ ನ್ಯಾಯತೀರ್ಪೂ ಇವುಗಳ ವಿಷಯದಲ್ಲಿ ಅಸ್ತಿವಾರವನ್ನು ತಿರಿಗಿ ಹಾಕದೆ ನಾವು ಪರಿಪೂರ್ಣತೆಗೆ ಹೋಗೋಣ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸ್ನಾನ, ಹಸ್ತಾರ್ಪಣಗಳ ವಿಷಯವಾದ ಉಪದೇಶ, ಸತ್ತವರಿಗೆ ಪುನರುತ್ಥಾನವೂ ನಿತ್ಯವಾದ ನ್ಯಾಯತೀರ್ಪೂ ಉಂಟೆಂಬದು ಇವುಗಳನ್ನು ಪದೇಪದೇ ಅಸ್ತಿವಾರವಾಗಿ ಹಾಕದೆ ಕ್ರಿಸ್ತನ ವಿಷಯವಾದ ಪ್ರಥಮ ಬೋಧನೆಯನ್ನು ಕುರಿತು ಇನ್ನೂ ಮಾತಾಡದೆ ಪೂರ್ಣವಾದ ತಿಳುವಳಿಕೆಗೆ ಸಾಗುತ್ತಾ ಹೋಗೋಣ.
Kannada Bible (KNCL) BSI 2016
ಜಡ ಕರ್ಮಗಳನ್ನು ಬಿಟ್ಟು ದೇವರಲ್ಲಿ ವಿಶ್ವಾಸವಿಡುವುದು, ಸ್ನಾನಸಂಸ್ಕಾರಗಳು, ಹಸ್ತನಿಕ್ಷೇಪ, ಸತ್ತವರ ಪುನರುತ್ಥಾನ, ನಿತ್ಯವಾದ ನ್ಯಾಯತೀರ್ಪು - ಈ ಬೋಧನಾ ಅಸ್ತಿವಾರವನ್ನು ಮತ್ತೆ ಮತ್ತೆ ಹಾಕಬೇಕಾಗಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೀಕ್ಷಾಸ್ನಾನಗಳ ಬೋಧನೆಯೂ ಹಸ್ತಾರ್ಪಣೆಯೂ ಸತ್ತವರ ಪುನರುತ್ಥಾನವೂ ನಿತ್ಯವಾದ ನ್ಯಾಯತೀರ್ಪೂ ಮುಂತಾದವುಗಳನ್ನು ಪುನಃ ಅಸ್ತಿವಾರವನ್ನಾಗಿ ಹಾಕದೆ, ನಾವು ಪರಿಪೂರ್ಣತೆಗೆ ಹೋಗೋಣ.