Hebrews 6:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಜನರು ತನ್ನ ಮೇಲೆ ಪದೇಪದೇ ಸುರಿಯುವ ಮಳೆಯನ್ನು ಹೀರಿಕೊಳ್ಳುವ ಭೂಮಿಯಂತಿದ್ದಾರೆ. ಅದು ಜನರಿಗೆ ಆಹಾರವನ್ನು ಕೊಡಲೆಂದು ರೈತನು ಅದರಲ್ಲಿ ಸಸಿಯನ್ನು ನೆಟ್ಟು ಬೆಳೆಸುತ್ತಾನೆ. ಅದು ಜನರಿಗೆ ಉಪಯುಕ್ತವಾದ ಬೆಳೆಗಳನ್ನು ಬೆಳೆಸಿದರೆ, ಅದಕ್ಕೆ ದೇವರಿಂದ ಆಶೀರ್ವಾದ ದೊರೆಯುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಭೂಮಿಯು ತನ್ನ ಮೇಲೆ ಅನೇಕಾವರ್ತಿ ಸುರಿಯುವ ಮಳೆಯನ್ನು ಹೀರಿಕೊಂಡು, ಅದು ಯಾರ ನಿಮಿತ್ತವಾಗಿ ವ್ಯವಸಾಯ ಮಾಡಲ್ಪಡುತ್ತದೋ, ಅವರಿಗೆ ಅನುಕೂಲವಾದ ಬೆಳೆಯನ್ನು ಕೊಡುತ್ತದೆ, ಅದು ದೇವರ ಆಶೀರ್ವಾದವನ್ನು ಹೊಂದುತ್ತದೆ.
Kannada BSI Bible 2016
ಭೂಮಿಯು ತನ್ನ ಮೇಲೆ ಅನೇಕಾವರ್ತಿ ಸುರಿಯುವ ಮಳೆಯನ್ನು ಹೀರಿಕೊಂಡು ಅದು ಯಾರ ನಿಮಿತ್ತವಾಗಿ ವ್ಯವಸಾಯ ಮಾಡಲ್ಪಡುತ್ತದೋ ಅವರಿಗೆ ಅನುಕೂಲ ವಾದ ಬೆಳೆಯನ್ನು ಕೊಟ್ಟರೆ ದೇವರ ಆಶೀರ್ವಾದವನ್ನು ಹೊಂದುತ್ತದೆ;
Kannada BSI JV (ಕನ್ನಡ ಸತ್ಯವೇದವು J.V. (BSI))
ಭೂವಿುಯು ತನ್ನ ಮೇಲೆ ಅನೇಕಾವರ್ತಿ ಸುರಿಯುವ ಮಳೆಯನ್ನು ಹೀರಿಕೊಂಡು ಅದು ಯಾರ ನಿವಿುತ್ತವಾಗಿ ವ್ಯವಸಾಯ ಮಾಡಲ್ಪಡುತ್ತದೋ ಅವರಿಗೆ ಅನುಕೂಲವಾದ ಬೆಳೆಯನ್ನು ಕೊಟ್ಟರೆ ದೇವರ ಆಶೀರ್ವಾದವನ್ನು ಹೊಂದುತ್ತದೆ;
Kannada Bible (KNCL) BSI 2016
ಭೂಮಿಯು ಕಾಲಾನುಕಾಲಕ್ಕೆ ತನ್ನ ಮೇಲೆ ಬೀಳುವ ಮಳೆಯ ನೀರನ್ನು ಹೀರಿಕೊಂಡು ವ್ಯವಸಾಯಗಾರನಿಗೆ ಅನುಕೂಲವಾದ ಬೆಳೆಯನ್ನು ಕೊಟ್ಟರೆ ದೇವರ ಆಶೀರ್ವಾದವನ್ನು ಪಡೆಯುತ್ತದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಭೂಮಿಯು ತನ್ನ ಮೇಲೆ ಆಗಾಗ್ಗೆ ಬೀಳುವ ಮಳೆಯನ್ನು ಹೀರಿಕೊಂಡು ಅದು ತನ್ನ ಒಡೆಯನಿಗೆ ಯೋಗ್ಯವಾದ ಬೆಳೆಯನ್ನು ಕೊಡುವುದಾದರೆ, ಅದು ದೇವರ ಆಶೀರ್ವಾದವನ್ನು ಹೊಂದುತ್ತದೆ.