Hebrews 6:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪ್ರಿಯ ಸ್ನೇಹಿತರೇ, ನಾವು ಈ ಸಂಗತಿಗಳನ್ನು ನಿಮಗೆ ಹೇಳುತ್ತಿದ್ದರೂ ನಿಮ್ಮಿಂದ ಇದಕ್ಕಿಂತಲೂ ಉತ್ತಮವಾದ ಕಾರ್ಯಗಳನ್ನು ಅಪೇಕ್ಷಿಸುತ್ತೇವೆ. ರಕ್ಷಣೆಗೆ ಸಂಬಂಧಿಸಿದ ಕಾರ್ಯಗಳನ್ನು ನೀವು ಮಾಡುತ್ತೀರೆಂದು ನಾವು ದೃಢವಾಗಿ ನಂಬಿದ್ದೇವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪ್ರಿಯರೇ, ಈ ರೀತಿಯಾಗಿ ನಾವು ಮಾತನಾಡಿದರೂ ನಿಮ್ಮ ವಿಷಯವಾಗಿಯೂ ರಕ್ಷಣೆಗೆ ಸಂಬಂಧಿಸಿದವುಗಳಲ್ಲಿಯೂ ನೀವು ಉತ್ತಮರಾಗಿದ್ದೀರೆಂದು ನಂಬಿದ್ದೇವೆ.
Kannada BSI Bible 2016
ಆದರೆ ಪ್ರಿಯರೇ, ಈ ರೀತಿಯಾಗಿ ನಾವು ಮಾತ ನಾಡಿದರೂ ನೀವು ಇದಕ್ಕಿಂತ ಉತ್ತಮವಾಗಿಯೂ ರಕ್ಷಣಕರವಾಗಿಯೂ ಇದ್ದೀರೆಂದು ದೃಢವಾಗಿ ನಂಬಿ ದ್ದೇವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಪ್ರಿಯರೇ, ಈ ರೀತಿಯಾಗಿ ನಾವು ಮಾತಾಡಿದರೂ ನೀವು ಇದಕ್ಕಿಂತ ಉತ್ತಮವಾಗಿಯೂ ರಕ್ಷಣಕರವಾಗಿಯೂ ಇರುವ ಸ್ಥಿತಿಯಲ್ಲಿದ್ದೀರೆಂದು ದೃಢವಾಗಿ ನಂಬಿದ್ದೇನೆ.
Kannada Bible (KNCL) BSI 2016
ಪ್ರಿಯರೇ, ನಾವು ಈ ರೀತಿ ಹೇಳಿದೆವಾದರೂ ನಿಮ್ಮ ಪರಿಸ್ಥಿತಿ ಉತ್ತಮವಾಗಿದೆ ಮತ್ತು ನೀವು ಜೀವೋದ್ಧಾರದ ಮಾರ್ಗದಲ್ಲಿ ಇದ್ದೀರಿ ಎಂಬ ದೃಢವಾದ ನಂಬಿಕೆ ನನಗಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪ್ರಿಯರೇ, ನಾವು ಈ ರೀತಿಯಾಗಿ ಮಾತನಾಡಿದರೂ ನಿಮ್ಮ ವಿಷಯವಾಗಿಯೂ ನೀವು ಉತ್ತಮವಾದವುಗಳನ್ನೂ ರಕ್ಷಣೆಯ ಕಾರ್ಯಗಳನ್ನೂ ಹೊಂದಿದ್ದೀರಿ ಎಂಬ ನಿಶ್ಚಯ ನಮಗಿದೆ.