Hebrews 7:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೆಲ್ಕಿಜೆದೇಕನು ಸಾಲೇಮಿನ ರಾಜನಾಗಿದ್ದನು ಮತ್ತು ಪರಾತ್ಪರನಾದ ದೇವರ ಯಾಜಕನಾಗಿದ್ದನು. ಅಬ್ರಹಾಮನು ರಾಜರುಗಳನ್ನು ಸೋಲಿಸಿ ಹಿಂದಿರುಗಿ ಬರುತ್ತಿರುವಾಗ ಅವನು ಅಬ್ರಹಾಮನನ್ನು ಸಂಧಿಸಿ ಆಶೀರ್ವದಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಮೆಲ್ಕಿಜೆದೇಕನು ಸಾಲೇಮಿನ ಅರಸನೂ ಮಹೋನ್ನತನಾದ ದೇವರ ಯಾಜಕನೂ ಆಗಿದ್ದನು. ಈತನು ರಾಜರನ್ನು ಸಂಹಾರ ಮಾಡಿ ಹಿಂದಿರುಗಿ ಬರುತ್ತಿದ್ದ ಅಬ್ರಹಾಮನನ್ನು ಎದುರುಗೊಂಡು ಅವನನ್ನು ಆಶೀರ್ವದಿಸಿದನು.
Kannada BSI Bible 2016
ಈ ಮೆಲ್ಕಿಜೆದೇಕನು ಸಾಲೇಮಿನ ಅರಸನೂ ಮಹೋನ್ನತನಾದ ದೇವರ ಯಾಜಕನೂ ಆಗಿದ್ದು ರಾಜರನ್ನು ಸಂಹರಿಸಿ ಹಿಂತಿರುಗಿ ಬರುತ್ತಿದ್ದ ಅಬ್ರಹಾಮನನ್ನು ಎದುರುಗೊಂಡು ಅವನನ್ನು ಆಶಿರ್ವದಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಮೆಲ್ಕಿಜೆದೇಕನು ಸಾಲೇವಿುನ ಅರಸನೂ ಪರಾತ್ಪರನಾದ ದೇವರ ಯಾಜಕನೂ ಆಗಿದ್ದನು; ರಾಜರನ್ನು ಹೊಡೆದು ಹಿಂತಿರುಗಿ ಬರುತ್ತಿದ್ದ ಅಬ್ರಹಾಮನನ್ನು ಎದುರುಗೊಂಡು ಅವನನ್ನು ಆಶೀರ್ವದಿಸಿದನು;
Kannada Bible (KNCL) BSI 2016
ಈ ಮೆಲ್ಕಿಸದೇಕನು ಸಾಲೇಮ್ ನಗರದ ರಾಜನೂ ಮಹೋನ್ನತ ದೇವರ ಯಾಜಕನೂ ಆಗಿದ್ದನು. ಶತ್ರುರಾಜರನ್ನು ಗೆದ್ದು ಹಿಂದಿರುಗುತ್ತಿದ್ದ ಅಬ್ರಹಾಮನನ್ನು ಈತನು ಎದುರುಗೊಂಡು ಆಶೀರ್ವದಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಮೆಲ್ಕಿಜೆದೇಕನು ಸಾಲೇಮಿನ ಅರಸನೂ ಮಹೋನ್ನತರಾದ ದೇವರ ಯಾಜಕನೂ ಆಗಿದ್ದನು. ರಾಜರನ್ನು ಸೋಲಿಸಿ, ಹಿಂದಿರುಗಿ ಬರುತ್ತಿದ್ದ ಅಬ್ರಹಾಮನನ್ನು ಸಂಧಿಸಿ ಅವನನ್ನು ಆಶೀರ್ವದಿಸಿದನು.