Hebrews 7:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೆಲ್ಕಿಜೆದೇಕನಂತಹ ಮತ್ತೊಬ್ಬ ಯಾಜಕನು (ಯೇಸು) ಬಂದಿರುವುದರಿಂದ ಇವು ಮತ್ತಷ್ಟು ಸ್ಪಷ್ಟವಾಗಿವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಯಾಜಕನು ಶರೀರದ ಸಂಬಂಧಪಟ್ಟಿರುವ ನಿಯಮದ ಪ್ರಕಾರವಾಗಿರದೆ, ಲಯವಾಗದ ಜೀವಶಕ್ತಿಯ ಮೇರೆಗೆ, ಮೆಲ್ಕಿಜೆದೇಕನಂತೆ ಇನ್ನೊಬ್ಬ ಯಾಜಕನು ಎಳುತ್ತಾನೆಂಬುದಾದರೆ ಅದು ಇನ್ನೂ ಹೆಚ್ಚು ಸ್ಪಷ್ಟವಾಗಿ ವ್ಯಕ್ತವಾಗುತ್ತದಲ್ಲಾ.
Kannada BSI Bible 2016
ಮೆಲ್ಕಿಜೆದೇಕನ ಹೋಲಿಕೆಗನುಸಾರ ಇನ್ನೊಬ್ಬ ಯಾಜಕನು ಏಳುತ್ತಾನೆಂಬದು ಇನ್ನು ಎಷ್ಟೋ ಹೆಚ್ಚಾಗಿ ಸ್ಪಷ್ಟವಾಗಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಬೇರೊಬ್ಬ ಯಾಜಕನು ಶರೀರಧರ್ಮ ವಿಷಯವಾದ ನಿಯಮದ ಪ್ರಕಾರವಾಗಿರದೆ ಮೆಲ್ಕಿಜೆದೇಕನ ಸಾದೃಶ್ಯದಲ್ಲಿ ನಿರ್ಲಯವಾದ ಜೀವದ ಶಕ್ತಿಯುಳ್ಳವನಾಗಿದ್ದು ಬರಬೇಕಾದದರಿಂದ ನಮ್ಮ ಸಿದ್ಧಾಂತ ಮತ್ತೂ ಸ್ವಷ್ಟವಾಯಿತು.
Kannada Bible (KNCL) BSI 2016
ಹೀಗೆ ಕಾಣಿಸಿಕೊಂಡ ಯಾಜಕ ಮೆಲ್ಕಿಸದೇಕನನ್ನು ಹೋಲುವುದರಿಂದ ನಾವು ಹೇಳುವ ವಿಷಯ ಇನ್ನೂ ಸ್ಪಷ್ಟವಾಗುತ್ತದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೆಲ್ಕಿಜೆದೇಕನಂತೆ ಇನ್ನೊಬ್ಬ ಯಾಜಕನು ಏಳುತ್ತಾನೆಂಬುದು ಇನ್ನೂ ಎಷ್ಟೋ ಹೆಚ್ಚಾಗಿ ಸ್ಪಷ್ಟವಾಗಿದೆ.