Hebrews 7:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಬ್ರಹಾಮನು ಅವನಿಗೆ ತನ್ನಲ್ಲಿದ್ದ ಎಲ್ಲಾ ವಸ್ತುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಕೊಟ್ಟನು. ಸಾಲೇಮಿನ ರಾಜನಾದ ಮೆಲ್ಕಿಜೆದೇಕನೆಂಬ ಹೆಸರಿಗೆ ಎರಡು ಅರ್ಥಗಳಿವೆ. ಮೆಲ್ಕಿಜೆದೇಕನೆಂದರೆ, “ನೀತಿರಾಜ” ಎಂಬರ್ಥ. “ಸಾಲೇಮಿನ ರಾಜ”ನೆಂದರೆ “ಸಮಾಧಾನದ ರಾಜ” ಎಂದರ್ಥ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನಿಗೆ ಅಬ್ರಹಾಮನು ತಾನು ಜಯಿಸಿಕೊಂಡು ಬಂದಿದ್ದ ಎಲ್ಲಾ ವಸ್ತುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಕೊಟ್ಟನು. “ಮೆಲ್ಕಿಜೆದೇಕ್”, ಎಂಬ ಹೆಸರಿಗೆ ಮೊದಲು “ನೀತಿಯ ರಾಜ” ಎಂದೂ, ಅನಂತರ “ಸಾಲೇಮಿನ ರಾಜ” ಎಂದರೆ “ಸಮಾಧಾನದ ರಾಜ” ಎಂದೂ ಅರ್ಥ.
Kannada BSI Bible 2016
ಅಬ್ರಹಾಮನು ಎಲ್ಲವುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಆತನಿಗೆ ಕೊಟ್ಟನು. ಆತನ ಹೆಸರಿಗೆ ಮೊದಲನೆಯದಾಗಿ ನೀತಿರಾಜನೆಂದು ತರುವಾಯ ಸಾಲೇಮಿನರಾಜ ಅಂದರೆ ಸಮಾಧಾನದ ರಾಜನೆಂದು ಅರ್ಥ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನಿಗೆ ಅಬ್ರಹಾಮನು ತಾನು ಜಯಿಸಿಕೊಂಡು ಬಂದಿದ್ದ ಎಲ್ಲಾ ವಸ್ತುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಕೊಟ್ಟನು. ಅವನ ಹೆಸರಿನ ಅರ್ಥವು ನೀತಿರಾಜ ಎಂಬದು; ಇದಲ್ಲದೆ ಅವನು ಸಾಲೇವಿುನರಾಜ ಅಂದರೆ ಸಮಾಧಾನರಾಜ;
Kannada Bible (KNCL) BSI 2016
ಆಗ ಅಬ್ರಹಾಮನು ತಾನು ಗೆದ್ದು ತಂದಿದ್ದ ಎಲ್ಲದರಲ್ಲೂ ದಶಮಾಂಶವನ್ನು ಆತನಿಗೆ ಕೊಟ್ಟು ಗೌರವಿಸಿದನು. ಮೆಲ್ಕಿಸದೇಕ ಎಂಬ ಹೆಸರಿನ ಮೂಲಾರ್ಥ, ‘ನ್ಯಾಯನೀತಿಯ ಅರಸ.’ ಅಲ್ಲದೆ, ಆತನು ಸಾಲೇಮಿನ ಅರಸನೂ ಆಗಿದ್ದನು. ಆದ್ದರಿಂದ ‘ಶಾಂತಿಸಮಾಧಾನದ ಅರಸ’ ಎಂಬ ಅರ್ಥವೂ ಉಂಟು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಬ್ರಹಾಮನು ಎಲ್ಲವುಗಳಲ್ಲಿ ಅವನಿಗೆ ಹತ್ತರಲ್ಲಿ ಒಂದು ಭಾಗವನ್ನು ಕೊಟ್ಟನು. ಅವನ ಹೆಸರಿಗೆ ಮೊದಲನೆಯದಾಗಿ, “ನೀತಿರಾಜನು” ಎಂದೂ ತರುವಾಯ “ಸಾಲೇಮಿನ ರಾಜ,” ಅಂದರೆ, “ಸಮಾಧಾನದ ಅರಸನು” ಎಂದರ್ಥ.