Hebrews 7:21 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕ್ರಿಸ್ತನು ದೇವರ ವಾಗ್ದಾನದಂತೆ ಯಾಜಕನಾದನು. ದೇವರು ಆತನಿಗೆ ಹೇಳಿದ್ದೇನೆಂದರೆ:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನಾದರೋ, ಪ್ರತಿಜ್ಞೆಯೊಡನೆ ಯಾಜಕನಾಗಿ ಮಾಡಲ್ಪಟ್ಟನು. ಆದರೆ ದೇವರು ಆತನಿಗೆ “‘ನೀನು ಸದಾಕಾಲವೂ ಯಾಜಕನಾಗಿದ್ದೀ’ ಎಂದು ನಾನು ಪ್ರಮಾಣಮಾಡಿ ನುಡಿದಿದ್ದೇನೆ ಮತ್ತು ತನ್ನ ಮನಸ್ಸನ್ನು ಬದಲಾಯಿಸುವುದಿಲ್ಲ” ಎಂಬುದಾಗಿ ಹೇಳಿದ್ದಾನೆ.
Kannada BSI Bible 2016
(ಆ ಯಾಜಕರೂ ಆಣೆಯಿಲ್ಲದೆ ಯಾಜಕರಾದರು); ಈತನಾದರೊ--ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹದ ಯಾಜಕನಾಗಿದ್ದೀ ಎಂದು ಆತನಿಗೆ ಹೇಳಿದ ಕರ್ತನು ಆಣೆಯಿಟ್ಟು ನುಡಿದನು, ಪಶ್ಚಾತ್ತಾಪಪಡುವದಿಲ್ಲ.
Kannada Bible (KNCL) BSI 2016
ಇವರಾದರೋ “ಎಂದೆಂದಿಗೂ ನೀ ಯಾಜಕನೆಂದು ಸರ್ವೇಶ್ವರನೇ ಪ್ರಮಾಣಿಸಿಹರು ಮನಸ್ಸನ್ನೆಂದೂ ಬದಲಾಯಿಸರವರು,” ಎಂಬ ಶಪಥ ಪಡೆದಿರುವ ಯಾಜಕರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಯೇಸು ದೇವರ ಆಣೆಯಿಂದಲೇ ಯಾಜಕರಾದರು. ಹೀಗೆ ದೇವರು ಹೇಳಿದ್ದೇನೆಂದರೆ: “ ಕರ್ತ ಆಗಿರುವ ನಾನು ಆಣೆಯಿಟ್ಟು ಹೇಳಿದ್ದೇನೆ. ನಾನು ಎಂದಿಗೂ ಮನಸ್ಸನ್ನು ಬದಲಾಯಿಸುವುದಿಲ್ಲ. ‘ನೀನು ಸದಾಕಾಲವೂ ಯಾಜಕನಾಗಿದ್ದೀ.’ ”