Hebrews 7:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇದಲ್ಲದೆ ಇತರ ಯಾಜಕರಲ್ಲಿ ಮರಣದ ಕಾರಣದಿಂದ ಒಬ್ಬನೇ ಶಾಶ್ವತವಾಗಿ ಯಾಜಕನಾಗಿ ಮುಂದುವರೆಯಲಾಗಲಿಲ್ಲ. ಆದ್ದರಿಂದ ಅಲ್ಲಿ ಅನೇಕ ಮಂದಿ ಯಾಜಕರಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಲೇವಿಯರು ಶಾಶ್ವತವಾಗಿ ಉದ್ಯೋಗನಡಿಸುವುದಕ್ಕೆ ಮರಣವು ಅಡ್ಡಿಯಾಗಿರುವುದರಿಂದ ಅವರಲ್ಲಿ ಅನೇಕರು ಯಾಜಕರಾದರು.
Kannada BSI Bible 2016
ಅವರು (ಲೇವಿಯರು) ಶಾಶ್ವತವಾಗಿ ಉದ್ಯೋಗ ನಡಿಸುವದಕ್ಕೆ ಮರಣ ಕಾರಣದಿಂದ ನಿಜವಾಗಿಯೂ ಅವರಲ್ಲಿ ಯಾಜಕರಾದವರು ಅನೇಕರು;
Kannada BSI JV (ಕನ್ನಡ ಸತ್ಯವೇದವು J.V. (BSI))
ಲೇವಿಯರು ಶಾಶ್ವತವಾಗಿ ಉದ್ಯೋಗ ನಡಿಸುವದಕ್ಕೆ ಮರಣವು ಅಡ್ಡಿಯಾದದರಿಂದ ಅವರಲ್ಲಿ ಯಾಜಕರಾದವರು ಅನೇಕರು;
Kannada Bible (KNCL) BSI 2016
ಲೇವಿಯರ ಯಾಜಕಸೇವೆಯನ್ನು ಮರಣವು ಮೊಟಕುಗೊಳಿಸುತ್ತಿದ್ದುದರಿಂದ ಅನೇಕರು ಯಾಜಕರಾಗಬೇಕಾಗುತ್ತಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಂದು ಕಡೆ ಆ ಯಾಜಕರು ಮುಂದುವರಿಯದಂತೆ ಮರಣವು ಅಡ್ಡಿಯಾದದ್ದರಿಂದ ಅನೇಕರು ಯಾಜಕರಾಗಬೇಕಾಗುತ್ತಿತ್ತು.