Hebrews 7:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೆಲ್ಕಿಜೆದೇಕನು ಎಷ್ಟು ದೊಡ್ಡವನೆಂಬುದನ್ನು ಸ್ವಲ್ಪ ಆಲೋಚಿಸಿರಿ. ನಮ್ಮ ಮೂಲಪಿತೃವಾದ ಅಬ್ರಹಾಮನು, ಯುದ್ಧದಲ್ಲಿ ತಾನು ಜಯಿಸಿದ್ದರಲ್ಲಿ ಹತ್ತನೆಯ ಒಂದು ಭಾಗವನ್ನು ಅವನಿಗೆ ಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈತನು ಎಷ್ಟು ಮಹಾನ್ ಆಗಿದ್ದನೆಂದು ಯೋಚಿಸಿರಿ. ನಮ್ಮ ಮೂಲಪಿತೃವಾದ ಅಬ್ರಹಾಮನು ತಾನು ಯುದ್ಧದಲ್ಲಿ ಗೆದ್ದು ತಂದ ಶ್ರೇಷ್ಠ ವಸ್ತುಗಳಲ್ಲಿ ಹತ್ತರಲ್ಲಿ ಒಂದು ಭಾಗವನ್ನು ಅವನಿಗೆ ಕೊಟ್ಟನಲ್ಲಾ.
Kannada BSI Bible 2016
ಈ ಮನುಷ್ಯನು ಎಷ್ಟು ದೊಡ್ಡವನಾಗಿದ್ದನೆಂದು ಆಲೋಚಿಸಿರಿ. ನಮ್ಮ ಮೂಲ ಪಿತೃವಾದ ಅಬ್ರಹಾ ಮನು ಸುಲುಕೊಂಡು ಬಂದವುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಆತನಿಗೆ ಕೊಟ್ಟನಲ್ಲಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಮನುಷ್ಯನು ಎಷ್ಟು ದೊಡ್ಡವನೆಂದು ಆಲೋಚಿಸಿರಿ. ನಮ್ಮ ಮೂಲಪಿತೃವಾದ ಅಬ್ರಹಾಮನು ತಾನು ಸುಲುಕೊಂಡು ಬಂದ ಶ್ರೇಷ್ಠವಸ್ತುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಅವನಿಗೆ ಕೊಟ್ಟನಲ್ಲಾ.
Kannada Bible (KNCL) BSI 2016
ನಮ್ಮ ಪಿತಾಮಹ ಅಬ್ರಹಾಮನೇ ತಾನು ಗೆದ್ದುತಂದ ಶ್ರೇಷ್ಠ ವಸ್ತುಗಳಲ್ಲಿ ದಶಮಾಂಶವನ್ನು ಈ ಮೆಲ್ಕಿಸದೇಕನಿಗೆ ಸಲ್ಲಿಸಿ ಗೌರವಿಸಬೇಕಾದರೆ ಆತನು ಎಂಥ ಮಹಾಪುರುಷನೆಂದು ನೀವೇ ಆಲೋಚಿಸಿ ನೋಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೆಲ್ಕಿಜೆದೇಕನು ಎಷ್ಟು ದೊಡ್ಡವನಾಗಿದ್ದನೆಂದು ಆಲೋಚಿಸಿರಿ. ಮೂಲ ಪಿತೃವಾದ ಅಬ್ರಹಾಮನು ಗೆದ್ದು ತಂದವುಗಳಲ್ಲಿ ಹತ್ತರಲ್ಲಿ ಒಂದು ಭಾಗವನ್ನು ಇವನಿಗೇ ಕೊಟ್ಟನಲ್ಲಾ.