Hebrews 7:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಲೇವಿಯಕುಲದ ಜನರಲ್ಲಿ ಯಾಜಕರಾಗುವವರು ಯೆಹೂದ್ಯರಿಂದ ಹತ್ತನೆಯ ಒಂದು ಭಾಗವನ್ನು ಪಡೆಯಬೇಕೆಂದು ಧರ್ಮಶಾಸ್ತ್ರವು ಹೇಳುತ್ತದೆ. ಯಾಜಕರು ತಮ್ಮ ಸ್ವಂತ ಜನರಿಂದಲೇ (ಯೆಹೂದ್ಯರು) ಅದನ್ನು ಸಂಗ್ರಹಿಸುತ್ತಾರೆ ಮತ್ತು ಅವರ ಜನರು ಅಬ್ರಹಾಮನ ಕುಟುಂಬಕ್ಕೆ ಸೇರಿದವರಾಗಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಜವಾಗಿಯೂ ಲೇವಿಯ ಕುಲದವರಲ್ಲಿ ಯಾಜಕೋದ್ಯೋಗವನ್ನು ಹೊಂದುವವರು, ಜನರಿಂದ ಅಂದರೆ ಅಬ್ರಹಾಮನ ವಂಶಸ್ಥರಾಗಿರುವ ಸಹೋದರರಿಂದಲೇ ದಶಮ ಭಾಗಗಳನ್ನು ತೆಗೆದುಕೊಳ್ಳುವುದಕ್ಕೆ ಧರ್ಮಶಾಸ್ತ್ರದಲ್ಲಿ ಅಪ್ಪಣೆಯಿದೆ.
Kannada BSI Bible 2016
ನಿಜವಾಗಿ ಲೇವಿಯ ಮಕ್ಕಳಲ್ಲಿ ಯಾಜಕೋದ್ಯೋಗವನ್ನು ಹೊಂದುವವರು ಜನರಿಂದ ಅಂದರೆ ಅಬ್ರಹಾಮನ ವಂಶಸ್ಥರಾಗಿರುವ ತಮ್ಮ ಸಹೋದರರಿಂದಲೇ ದಶಮ ಭಾಗಗಳನ್ನು ತೆಗೆದುಕೊಳ್ಳುವದಕ್ಕೆ ನ್ಯಾಯ ಪ್ರಮಾಣದಲ್ಲಿ ಅಪ್ಪಣೆಯುಂಟು.
Kannada BSI JV (ಕನ್ನಡ ಸತ್ಯವೇದವು J.V. (BSI))
ಲೇವಿಯ ಕುಲದವರಲ್ಲಿ ಯಾಜಕೋದ್ಯೋಗವನ್ನು ಹೊಂದುವವರು ಜನರಿಂದ ಅಂದರೆ ಅಬ್ರಹಾಮನ ವಂಶಸ್ಥರಾಗಿರುವ ತಮ್ಮ ಸಹೋದರರಿಂದಲೇ ದಶಮಭಾಗಗಳನ್ನು ತೆಗೆದುಕೊಳ್ಳುವದಕ್ಕೆ ಧರ್ಮಶಾಸ್ತ್ರದಲ್ಲಿ ಅಪ್ಪಣೆ ಉಂಟು.
Kannada Bible (KNCL) BSI 2016
ಲೇವಿಯ ಕುಲದವರಲ್ಲಿ ಯಾಜಕ ಪದವಿಯನ್ನು ಹೊಂದಿದವರು ಜನರಿಂದ, ಅಂದರೆ ಅಬ್ರಹಾಮನ ವಂಶಜರಾದ ತಮ್ಮ ಸ್ವಜನರಿಂದ, ದಶಮಾಂಶವನ್ನು ತೆಗೆದುಕೊಳ್ಳುವುದಕ್ಕೆ ಧರ್ಮಶಾಸ್ತ್ರದಲ್ಲಿ ಅಪ್ಪಣೆ ಉಂಟು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಜವಾಗಿಯೂ ಲೇವಿಯ ಮಕ್ಕಳಲ್ಲಿ ಯಾಜಕೋದ್ಯೋಗವನ್ನು ಹೊಂದುವವರು, ಜನರಿಂದ ಅಂದರೆ ಅಬ್ರಹಾಮನ ವಂಶಸ್ಥರಾಗಿರುವ ತಮ್ಮ ಸಹೋದರರಿಂದಲೇ ದಶಮಭಾಗಗಳನ್ನು ತೆಗೆದುಕೊಳ್ಳುವುದಕ್ಕೆ ಮೋಶೆಯ ನಿಯಮದಲ್ಲಿ ಅಪ್ಪಣೆಯಿದೆ.