Hebrews 7:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾಜಕರು ಹತ್ತನೆಯ ಒಂದು ಭಾಗವನ್ನು ಪಡೆಯುತ್ತಾರೆ. ಆದರೆ ಅವರು ಸ್ವಲ್ಪಕಾಲ ಜೀವಿಸಿದ್ದು ನಂತರ ಸಾಯುತ್ತಾರೆ. ಆದರೆ ಅಬ್ರಹಾಮನಿಂದ ಹತ್ತನೆಯ ಒಂದು ಭಾಗವನ್ನು ಪಡೆದ ಮೆಲ್ಕಿಜೆದೇಕನು ಜೀವಂತನಾಗಿಯೇ ಇರುತ್ತಾನೆಂದು ಪವಿತ್ರ ಗ್ರಂಥವು ಹೇಳುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಶಮ ಭಾಗವನ್ನು ತೆಗೆದುಕೊಳ್ಳುವ ಯಾಜಕರು ಒಂದಲ್ಲಾ ಒಂದು ದಿನ ಸಾಯುತ್ತಾರೆ. ಆದರೆ ಅಬ್ರಹಾಮನಿಂದ ದಶಮ ಭಾಗವನ್ನು ತೆಗೆದುಕೊಂಡಾತನು ಚಿರಂಜೀವಿಯಾಗಿರುವನು.
Kannada BSI Bible 2016
ಇಲ್ಲಿ ಸಾಯತಕ್ಕ ಮನುಷ್ಯರು ದಶಮ ಭಾಗಗಳನ್ನು ತಕ್ಕೊಳ್ಳುತ್ತಾರೆ; ಆದರೆ ಅಲ್ಲಿ ಜೀವಿಸುತ್ತಿದ್ದಾನೆಂದು ಸಾಕ್ಷಿಹೊಂದಿರುವಾತನು ತಕ್ಕೊಳ್ಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಲೇವಿಯರ ಕ್ರಮವನ್ನು ನೋಡಿದರೆ ಸಾಯತಕ್ಕ ಮನುಷ್ಯರು ದಶಮಭಾಗಗಳನ್ನು ತಕ್ಕೊಳ್ಳುತ್ತಾರೆ; ಆದರೆ ಮೆಲ್ಕಿಜೆದೇಕನ ಕ್ರಮವನ್ನು ನೋಡಿದರೆ ಜೀವಿಸುತ್ತಿದ್ದಾನೆಂದು ಸಾಕ್ಷಿಹೊಂದಿರುವವನು ತಕ್ಕೊಳ್ಳುತ್ತಾನೆ.
Kannada Bible (KNCL) BSI 2016
ಇದಲ್ಲದೆ, ದಶಮಾಂಶವನ್ನು ಪಡೆಯುತ್ತಿರುವ ಲೇವಿಯರು ಕೇವಲ ಮರ್ತ್ಯ ಮಾನವರು; ಅದನ್ನು ಪಡೆದ ಮೆಲ್ಕಿಸದೇಕನು ತಾನು ಅಮರ್ತ್ಯ ಯಾಜಕನೆಂದು ಸಾಕ್ಷ್ಯಾಧಾರ ಪಡೆದವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಲ್ಲಿ ದಶಮಭಾಗಗಳನ್ನು ತೆಗೆದುಕೊಳ್ಳುತ್ತಿರುವ ಲೇವಿಯರು ಕೇವಲ ಮರ್ತ್ಯ ಮಾನವರು. ಆದರೆ ಅಲ್ಲಿ ತೆಗೆದುಕೊಳ್ಳುವ ಮೆಲ್ಕಿಜೆದೇಕನು ಜೀವಿಸುತ್ತಿದ್ದಾನೆಂದು ಸಾಕ್ಷಿ ಹೊಂದಿರುವವನು.