Hebrews 7:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಲೇವಿಯರು ಜನರಿಂದ ಹತ್ತನೆಯ ಒಂದು ಭಾಗವನ್ನು ತೆಗೆದುಕೊಳ್ಳುತ್ತಾರೆ. ಆದರೆ ಅಬ್ರಹಾಮನು ಮೆಲ್ಕಿಜೆದೇಕನಿಗೆ ಹತ್ತನೆಯ ಒಂದು ಭಾಗವನ್ನು ಕೊಟ್ಟನೆಂದರೆ, ಲೇವಿಯೂ ಕೊಟ್ಟಂತಾಯಿತೆಂದು ಹೇಳಬಹುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತು ದಶಮ ಭಾಗಗಳನ್ನು ತೆಗೆದುಕೊಳ್ಳುವ ಲೇವಿಯು ಕೂಡ ಅಬ್ರಹಾಮನ ಮೂಲಕ ದಶಮ ಭಾಗಗಳನ್ನು ಕೊಟ್ಟ ಹಾಗಾಯಿತು.
Kannada BSI Bible 2016
ಇದು ಮಾತ್ರವಲ್ಲದೆ ದಶಮಭಾಗ ಗಳನ್ನು ತಕ್ಕೊಳ್ಳುವ ಲೇವಿಯೂ ಕೂಡ ಅಬ್ರಹಾಮನ ಮೂಲಕ ದಶಮ ಭಾಗಗಳನ್ನು ಕೊಟ್ಟ ಹಾಗಾಯಿ ತೆಂದು ನಾನು ಹೇಳಬಹುದು;
Kannada BSI JV (ಕನ್ನಡ ಸತ್ಯವೇದವು J.V. (BSI))
ಇದು ಮಾತ್ರವಲ್ಲದೆ ದಶಮಭಾಗಗಳನ್ನು ತಕ್ಕೊಳ್ಳುವ ಲೇವಿಯೂ ಕೂಡ ಅಬ್ರಹಾಮನ ಮೂಲಕ ದಶಮಭಾಗಗಳನ್ನು ಕೊಟ್ಟ ಹಾಗಾಯಿತೆಂದು ಹೇಳಬಹುದು;
Kannada Bible (KNCL) BSI 2016
ಅಷ್ಟೇ ಅಲ್ಲ, ದಶಮಾಂಶವನ್ನು ತೆಗೆದುಕೊಳ್ಳುತ್ತಿದ್ದ ಲೇವಿಯೂ ಕೂಡ ಅಬ್ರಹಾಮನ ಮುಖಾಂತರ ದಶಮಾಂಶವನ್ನು ತೆತ್ತನು ಎಂದು ಹೇಳಬಹುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದು ಮಾತ್ರವಲ್ಲದೆ ದಶಮಭಾಗಗಳನ್ನು ತೆಗೆದುಕೊಳ್ಳುವ ಲೇವಿಯೂ ಅಬ್ರಹಾಮನ ಮೂಲಕ ದಶಮಭಾಗಗಳನ್ನು ಕೊಟ್ಟ ಹಾಗಾಯಿತು.