Hebrews 8:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆತನು ಮಹಾ ಪವಿತ್ರಸ್ಥಳದಲ್ಲಿ ಅಂದರೆ ಜನರಿಂದ ನಿರ್ಮಿತವಾಗದೆ, ದೇವರಿಂದಲೇ ನಿರ್ಮಿಸಲ್ಪಟ್ಟಿರುವ ನಿಜವಾದ ದೇವದರ್ಶನ ಗುಡಾರದಲ್ಲಿ ಸೇವೆಮಾಡುತ್ತಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಪವಿತ್ರ ಸ್ಥಾನದಲ್ಲಿ ಮನುಷ್ಯರಿಂದಲ್ಲ, ಕರ್ತನೇ ಹಾಕಿದ ನಿಜವಾದ ದೇವದರ್ಶನ ಗುಡಾರದಲ್ಲಿ ಯಾಜಕೋದ್ಯೋಗ ನಡಿಸುವವನಾಗಿದ್ದಾನೆ.
Kannada BSI Bible 2016
ಈತನು ಪವಿತ್ರ ಸ್ಥಾನದಲ್ಲಿ ಅಂದರೆ ಮನುಷ್ಯನಿಂದಲ್ಲ, ಕರ್ತನೇ ಹಾಕಿದ ನಿಜವಾದ ಗುಡಾರದಲ್ಲಿ ಸೇವೆ ನಡಿಸುವಾತನಾಗಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಈತನು ಪವಿತ್ರಸ್ಥಾನದಲ್ಲಿ ಅಂದರೆ ಮನುಷ್ಯನು ಹಾಕದೆ ಕರ್ತನೇ ಹಾಕಿದ ನಿಜವಾದ ದೇವದರ್ಶನಗುಡಾರದಲ್ಲಿ ಯಾಜಕೋದ್ಯೋಗ ನಡಿಸುವವನಾಗಿದ್ದಾನೆ.
Kannada Bible (KNCL) BSI 2016
ಅಲ್ಲಿ, ಆ ಪವಿತ್ರಸ್ಥಾನದಲ್ಲಿ ಮನುಷ್ಯರಿಂದಲ್ಲ, ದೇವರಿಂದಲೇ ನಿರ್ಮಿತವಾದ ನಿಜವಾದ ಗರ್ಭಗುಡಿಯಲ್ಲಿ, ಅವರು ಯಾಜಕ ಸೇವೆಯನ್ನು ಸಲ್ಲಿಸುತ್ತಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕ್ರಿಸ್ತ ಯೇಸು ಆಗಿರುವ ಇವರು ಪವಿತ್ರ ಸ್ಥಾನದಲ್ಲಿ ಅಂದರೆ, ಮನುಷ್ಯರಿಂದಲ್ಲ ದೇವರೇ ನಿರ್ಮಿಸಿದ ಪವಿತ್ರ ಸ್ಥಾನದ ನಿಜ ಗುಡಾರದಲ್ಲಿ ಸೇವೆಮಾಡುವವರಾಗಿದ್ದಾರೆ.