Hebrews 8:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪ್ರತಿಯೊಬ್ಬ ಪ್ರಧಾನಯಾಜಕನೂ ದೇವರಿಗೆ ಯಜ್ಞಗಳನ್ನೂ ಕಾಣಿಕೆಗಳನ್ನೂ ಅರ್ಪಿಸಬೇಕು. ಆದ್ದರಿಂದ ನಮ್ಮ ಪ್ರಧಾನ ಯಾಜಕನೂ ದೇವರಿಗೆ ಏನನ್ನಾದರೂ ಅರ್ಪಿಸಲೇಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪ್ರತಿಯೊಬ್ಬ ಮಹಾಯಾಜಕನು ಕಾಣಿಕೆಗಳನ್ನೂ, ಯಜ್ಞಗಳನ್ನೂ ಸಮರ್ಪಿಸುವುದಕ್ಕೆ ನೇಮಕವಾಗಿರುತ್ತಾನೆ. ಆದ್ದರಿಂದ ಸಮರ್ಪಿಸುವುದಕ್ಕೆ ಈತನಿಗೂ ಸಹ ಏನಾದರೂ ಇರುವುದು ಅಗತ್ಯವಾಗಿದೆ.
Kannada BSI Bible 2016
ಪ್ರತಿಯೊಬ್ಬ ಮಹಾಯಾಜಕನು ಕಾಣಿಕೆಗಳನ್ನೂ ಯಜ್ಞಗಳನ್ನೂ ಸಮರ್ಪಿಸುವದಕ್ಕೆ ನೇಮಕವಾಗಿರು ತ್ತಾನಷ್ಟೆ. ಆದದರಿಂದ ಸಮರ್ಪಿಸುವದಕ್ಕೆ ಈತನಿಗೆ ಸಹ ಏನಾದರೂ ಇರುವದು ಅವಶ್ಯವಾಗಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಪ್ರತಿಯೊಬ್ಬ ಮಹಾಯಾಜಕನು ಕಾಣಿಕೆಗಳನ್ನೂ ಯಜ್ಞಗಳನ್ನೂ ಸಮರ್ಪಿಸುವದಕ್ಕೆ ನೇಮಕವಾಗಿರುತ್ತಾನಷ್ಟೆ; ಆದದರಿಂದ ಸಮರ್ಪಿಸುವದಕ್ಕೆ ಈ ಮಹಾಯಾಜಕನಿಗೂ ಏನಾದರೂ ಇರಬೇಕು.
Kannada Bible (KNCL) BSI 2016
ಪ್ರತಿಯೊಬ್ಬ ಪ್ರಧಾನಯಾಜಕನು ಕಾಣಿಕೆಗಳನ್ನೂ ಬಲಿಗಳನ್ನೂ ಅರ್ಪಿಸುವುದಕ್ಕಾಗಿಯೇ ನೇಮಕಗೊಂಡಿರುತ್ತಾನೆ. ಆದ್ದರಿಂದ ಸಮರ್ಪಿಸುವುದಕ್ಕೆ ನಮ್ಮ ಈ ಪ್ರಧಾನಯಾಜಕರಿಗೂ ಏನಾದರೂ ಇರಲೇಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪ್ರತಿಯೊಬ್ಬ ಮಹಾಯಾಜಕನು ಕಾಣಿಕೆಗಳನ್ನೂ ಯಜ್ಞಗಳನ್ನೂ ಸಮರ್ಪಿಸುವುದಕ್ಕೆ ನೇಮಕವಾಗಿರುತ್ತಾನೆ. ಆದ್ದರಿಂದ ಸಮರ್ಪಿಸುವುದಕ್ಕೆ ಯೇಸುವಿಗೆ ಸಹ ಏನಾದರೂ ಇರುವುದು ಅವಶ್ಯವಾಗಿದೆ.