Hebrews 8:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆತನು ಇನ್ನೂ ಭೂಮಿಯ ಮೇಲೆ ವಾಸಮಾಡುತ್ತಿದ್ದರೆ ಯಾಜಕನಾಗಿರುತ್ತಿರಲಿಲ್ಲ. ಕಾರಣವೇನೆಂದರೆ, ಧರ್ಮಶಾಸ್ತ್ರದ ಪ್ರಕಾರ ದೇವರಿಗೆ ಕಾಣಿಕೆಗಳನ್ನು ಅರ್ಪಿಸುವ ಯಾಜಕರು ಈಗಾಗಲೇ ಇಲ್ಲಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಇನ್ನೂ ಭೂಮಿಯ ಮೇಲೆ ಇದ್ದಿದ್ದರೆ ಯಾಜಕನಾಗುತ್ತಿರಲಿಲ್ಲ. ಯಾಕೆಂದರೆ ಧರ್ಮಶಾಸ್ತ್ರದ ಪ್ರಕಾರ ಕಾಣಿಕೆಗಳನ್ನು ಸಮರ್ಪಿಸುವವರು ಇದ್ದಾರಲ್ಲಾ.
Kannada BSI Bible 2016
ಈತನು ಇನ್ನೂ ಭೂಮಿಯ ಮೇಲೆ ಇದ್ದದ್ದೇಯಾಗಿದ್ದರೆ ಯಾಜಕ ನಾಗುವ ಹಾಗಿದ್ದಿಲ್ಲ. ಯಾಕಂದರೆ ನ್ಯಾಯಪ್ರಮಾಣದ ಪ್ರಕಾರ ಕಾಣಿಕೆಗಳನ್ನು ಸಮರ್ಪಿಸುವ ಯಾಜಕರು ಇದ್ದೇ ಇರುತ್ತಾರೆ;
Kannada BSI JV (ಕನ್ನಡ ಸತ್ಯವೇದವು J.V. (BSI))
ಈತನು ಇನ್ನೂ ಭೂವಿುಯ ಮೇಲೆ ಇದ್ದದ್ದೇ ಆದರೆ ಯಾಜಕನಾಗಿರುತ್ತಿರಲಿಲ್ಲ; ಯಾಕಂದರೆ ಧರ್ಮನಿಯಮದ ಪ್ರಕಾರ ಕಾಣಿಕೆಗಳನ್ನು ಸಮರ್ಪಿಸುವವರು ಇದ್ದೇ ಇರುತ್ತಾರೆ;
Kannada Bible (KNCL) BSI 2016
ಇವರು ಧರೆಯಲ್ಲೇ ಇದ್ದಿದ್ದರೆ ಯಾಜಕರಾಗಿರುತ್ತಿರಲಿಲ್ಲ. ಏಕೆಂದರೆ ಧರ್ಮಶಾಸ್ತ್ರ ವಿಧಿಸುವ ಕಾಣಿಕೆಗಳನ್ನು ಸಮರ್ಪಿಸುವುದಕ್ಕೆ ಬೇರೆ ಯಾಜಕರು ಇದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಭೂಮಿಯ ಮೇಲೆ ಇರುವುದಾದರೆ ಯಾಜಕರೇ ಆಗುತ್ತಿರಲಿಲ್ಲ. ಏಕೆಂದರೆ ಮೋಶೆಯ ನಿಯಮದ ಪ್ರಕಾರ ಕಾಣಿಕೆಗಳನ್ನು ಸಮರ್ಪಿಸುವವರು ಇದ್ದಾರಲ್ಲಾ.