Hebrews 8:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈ ಯಾಜಕರು ಮಾಡುವ ಕಾರ್ಯಗಳು ಪರಲೋಕದಲ್ಲಿನ ಕಾರ್ಯಗಳ ನಿಜವಾದ ಪ್ರತಿರೂಪಗಳೂ ಛಾಯೆಗಳೂ ಆಗಿವೆ. ಮೋಶೆಯು ದೇವದರ್ಶನ ಗುಡಾರವನ್ನು ನಿರ್ಮಿಸಲು ಸಿದ್ಧನಾದಾಗ ದೇವರು ಅವನಿಗೆ, “ನಾನು ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನೂ ಎಚ್ಚರಿಕೆಯಿಂದ ನಿರ್ಮಿಸಬೇಕು” ಎಂದು ಹೇಳಿದ್ದು ಈ ಕಾರಣದಿಂದಲೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಶೆಯು ಗುಡಾರವನ್ನು ಕಟ್ಟುವುದಕ್ಕಿದ್ದಾಗ, “ನೋಡು, ನಾನು ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನೂ ಮಾಡಬೇಕು” ಎಂದು ದೇವರಿಂದ ಎಚ್ಚರಿಸಲ್ಪಟ್ಟಂತೆಯೇ ಪರಲೋಕದಲ್ಲಿರುವವುಗಳ ಪ್ರತಿರೂಪವೂ, ಛಾಯೆಯೂ ಆಗಿರುವ ಆಲಯದಲ್ಲಿ ಅವರು ಸೇವೆ ಸಲ್ಲಿಸುತ್ತಿದ್ದಾರೆ.
Kannada BSI Bible 2016
ಅವರು ಪರಲೋಕದಲ್ಲಿರುವವಗಳ ನಿದರ್ಶನವೂ ಛಾಯೆಯೂ ಆಗಿರುವದರಲ್ಲಿ (ಆಲಯ ದಲ್ಲಿ) ಸೇವೆಯನ್ನು ನಡಿಸುವವರು. ಮೋಶೆಯು ದೇವರಿಂದ ಎಚ್ಚರಿಸಲ್ಪಟ್ಟು ಗುಡಾರವನ್ನು ಮಾಡುವದ ಕ್ಕಿದ್ದಾಗ--ನೋಡು, ನಾನು ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನೂ ಮಾಡಬೇ
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಪರಲೋಕದಲ್ಲಿರುವ ದೇವಾಲಯದ ಪ್ರತಿರೂಪವೂ ಛಾಯೆಯೂ ಆಗಿರುವ ಆಲಯದಲ್ಲಿ ಯಾಜಕತ್ವವನ್ನು ನಡಿಸುವವರು. ಮೋಶೆಯು ದೇವದರ್ಶನಗುಡಾರವನ್ನು ಮಾಡುವದಕ್ಕಿದ್ದಾಗ ಬೆಟ್ಟದಲ್ಲಿ ನಾನು ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನು ಮಾಡಿಸಬೇಕು ಎಂಬ ದೈವೋಕ್ತಿಯು ಅವನಿಗೆ ಉಂಟಾಯಿತಲ್ಲಾ.
Kannada Bible (KNCL) BSI 2016
ಸ್ವರ್ಗೀಯ ಗರ್ಭಗುಡಿಯ ಚಿಹ್ನೆ ಹಾಗೂ ಛಾಯೆಯಾಗಿರುವ ಆಲಯಗಳಲ್ಲಿ ಇಲ್ಲಿಯ ಯಾಜಕರು ಉಪಾಸನೆ ಮಾಡುತ್ತಾರೆ. ಮೋಶೆ ಗರ್ಭಗುಡಿಯನ್ನು ನಿರ್ಮಿಸಲು ಆರಂಭಿಸಿದಾಗ, ದೇವರು ಆತನಿಗೆ, “ಬೆಟ್ಟದ ಮೇಲೆ ನಾನು ತೋರಿಸಿದ ನಕ್ಷೆಯ ಪ್ರಕಾರವೇ ನೀನು ಎಲ್ಲವನ್ನೂ ನಿರ್ಮಿಸಬೇಕು,” ಎಂದು ಆಜ್ಞೆಯನ್ನಿತ್ತರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಪರಲೋಕದಲ್ಲಿರುವವುಗಳ ನಿದರ್ಶನವೂ ಛಾಯೆಯೂ ಆಗಿರುವ ಆಲಯಗಳಲ್ಲಿ ಸೇವೆಯನ್ನು ನಡೆಸುವರು. ಇದರಂತೆಯೇ ಮೋಶೆಯು ಗುಡಾರವನ್ನು ಮಾಡುವುದಕ್ಕಿದ್ದಾಗ, “ನೋಡು, ನಾನು ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನೂ ಮಾಡಬೇಕು,” ಎಂದು ದೇವರಿಂದ ಎಚ್ಚರಿಕೆ ಕೊಡಲಾಗಿತ್ತಲ್ಲವೇ?