Hebrews 9:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಕ್ರಿಸ್ತನು ಈಗಾಗಲೇ ಪ್ರಧಾನಯಾಜಕನಾಗಿ ಬಂದಿದ್ದಾನೆ. ಈಗ ನಾವು ಹೊಂದಿರುವ ಉತ್ತಮ ಸಂಗತಿಗಳಿಗೆ ಆತನು ಪ್ರಧಾನಯಾಜಕನಾಗಿದ್ದಾನೆ. ಇತರ ಯಾಜಕರಾದರೊ ಗುಡಾರದಲ್ಲಿ ಸೇವೆಯನ್ನು ಮಾಡಿದರು. ಆದರೆ ಕ್ರಿಸ್ತನು ಗುಡಾರದಲ್ಲಿ ಸೇವೆ ಮಾಡದೆ ಅದಕ್ಕಿಂತಲೂ ಶ್ರೇಷ್ಠವಾದ ಸ್ಥಳದಲ್ಲಿ ಸೇವೆ ಮಾಡುತ್ತಾನೆ. ಅದು ಮತ್ತಷ್ಟು ಪರಿಪೂರ್ಣವಾದದ್ದು. ಅದು ಮನುಷ್ಯರಿಂದ ನಿರ್ಮಿತವಾದದ್ದಲ್ಲ. ಲೋಕಕ್ಕೆ ಸೇರಿದ್ದೂ ಅಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕ್ರಿಸ್ತನಾದರೋ ಈಗ ದೊರೆತಿರುವ ಶುಭಗಳ ಮಹಾಯಾಜಕನಾಗಿ ಬಂದು, ಮನುಷ್ಯರ ಕೈಯಿಂದ ಕಟ್ಟಲ್ಪಡದಂಥದೂ, ಇಹಲೋಕದ ಸೃಷ್ಟಿಗೆ ಸಂಬಂಧಪಡದಂಥದೂ, ಶ್ರೇಷ್ಠವಾದುದೂ, ಬಹು ಪರಿಪೂರ್ಣವಾದುದೂ ಆಗಿರುವ ಗುಡಾರದಲ್ಲಿ ಸೇವೆ ಮಾಡುವವನಾಗಿ,
Kannada BSI Bible 2016
ಆದರೆ ಕ್ರಿಸ್ತನು ಬರಬೇಕಾಗಿದ್ದ ಮೇಲುಗಳ ಕುರಿತು ಮಹಾಯಾಜಕನಾಗಿ ಬಂದು ಕೈಯಿಂದ ಕಟ್ಟಲ್ಪಡದಂಥ ಅಂದರೆ ಈ ಕಟ್ಟಡಕ್ಕೆ ಸಂಬಂಧವಾ ಗಿರದೆ ಶ್ರೇಷ್ಠವಾಗಿಯೂ ಪರಿಪೂರ್ಣವಾಗಿಯೂ ಇರುವ ಗುಡಾರದ ಮೂಲಕ
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಕ್ರಿಸ್ತನು ಈಗ ದೊರೆತಿರುವ ಮೇಲುಗಳನ್ನು ಕುರಿತು ಮಹಾಯಾಜಕನಾಗಿ ಬಂದು ಕೈಯಿಂದ ಕಟ್ಟಲ್ಪಡದಂಥ ಅಂದರೆ ಈ ಸೃಷ್ಟಿಗೆ ಸಂಬಂಧಪಡದಂಥ ಘನವಾಗಿಯೂ ಉತ್ಕೃಷ್ಟವಾಗಿಯೂ ಇರುವ ಗುಡಾರದಲ್ಲಿ ಸೇವೆಯನ್ನು ಮಾಡುವವನಾಗಿ
Kannada Bible (KNCL) BSI 2016
ಆದರೆ ಕ್ರಿಸ್ತಯೇಸು ಈಗಾಗಲೇ ಪ್ರಧಾನಯಾಜಕರಾಗಿ ಬಂದಿದ್ದಾರೆ. ಅವರು ಅನುಗ್ರಹಿಸುವ ಸತ್ಫಲಗಳು ಈಗಾಗಲೇ ನಮಗೆ ದೊರೆತಿವೆ. ಅವರು ಸೇವೆ ಸಲ್ಲಿಸುತ್ತಿರುವ ಗುಡಾರವು ಹಿಂದಿನವುಗಳಿಗಿಂತ ಶ್ರೇಷ್ಠವಾದುದು ಮತ್ತು ಪರಿಪೂರ್ಣವಾದುದು. ಇದು ಕೈಯಿಂದ ಕಟ್ಟಿದ್ದಲ್ಲ. ಇಹಲೋಕದ ಸೃಷ್ಟಿಗೆ ಸಂಬಂಧಪಟ್ಟಿದ್ದಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಕ್ರಿಸ್ತ ಯೇಸು ಈಗಾಗಲೇ ಮಹಾಯಾಜಕರಾಗಿ ಬಂದಿದ್ದಾರೆ. ಅವರು ಕೊಡುವ ಒಳ್ಳೆಯವುಗಳು ಈಗಾಗಲೇ ನಮಗೆ ದೊರೆತಿವೆ. ಅವರು ಹಿಂದಿನವುಗಳಿಗಿಂತಲೂ ಶ್ರೇಷ್ಠವಾದದ್ದೂ ಪರಿಪೂರ್ಣವಾದದ್ದೂ ಆಗಿರುವ ಗುಡಾರವನ್ನು ಅಂದರೆ ಕೈಯಿಂದ ಕಟ್ಟಿರದಂತದ್ದೂ ಇಹಲೋಕದ ಸೃಷ್ಟಿಗೆ ಸಂಬಂಧಪಟ್ಟಿರದಂತದ್ದೂ ಆಗಿರುವ ಗುಡಾರವನ್ನು ಪ್ರವೇಶಿಸಿದರು.