Hebrews 9:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆತನು ಒಂದೇ ಒಂದು ಸಾರಿ ಮಹಾ ಪವಿತ್ರಸ್ಥಳಕ್ಕೆ ಪ್ರವೇಶಿಸಿದನು. ಆತನು ಹೋತಗಳ ಮತ್ತು ಹೋರಿಕರುಗಳ ರಕ್ತವನ್ನು ತೆಗೆದುಕೊಳ್ಳದೆ ತನ್ನ ಸ್ವಂತ ರಕ್ತದಿಂದಲೇ ಮಹಾ ಪವಿತ್ರಸ್ಥಳಕ್ಕೆ ಪ್ರವೇಶಿಸಿ ನಮಗೆ ನಿತ್ಯಸ್ವಾತಂತ್ರ್ಯವನ್ನು ತಂದುಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೋತಗಳ ಮತ್ತು ಹೋರಿಕರುಗಳ ರಕ್ತದ ಮೂಲಕವಲ್ಲ ತನ್ನ ಸ್ವಂತ ರಕ್ತದ ಮೂಲಕ ಒಂದೇ ಸಾರಿ ಎಲ್ಲರಿಗೋಸ್ಕರ ಪರಿಶುದ್ಧ ಸ್ಥಳದೊಳಗೆ ಪ್ರವೇಶಿಸಿ ನಿತ್ಯ ವಿಮೋಚನೆಯನ್ನು ಸಾಧಿಸಿದನು.
Kannada BSI Bible 2016
ಹೋತಗಳ ಮತ್ತು ಕರುಗಳ ರಕ್ತವನ್ನು ತೆಗೆದುಕೊಳ್ಳದೆ ತನ್ನ ಸ್ವಂತ ರಕ್ತವನ್ನೇ ತೆಗೆದುಕೊಂಡು ನಮಗೋಸ್ಕರ ನಿತ್ಯವಿಮೋಚನೆಯನ್ನು ಸಂಪಾದಿಸಿಕೊಂಡವನಾಗಿ ಒಂದೇ ಸಾರಿ ಪರಿಶುದ್ಧ ಸ್ಥಳದೊಳಗೆ ಪ್ರವೇಶಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೋತಗಳ ಮತ್ತು ಹೋರಿಕರಗಳ ರಕ್ತವನ್ನು ತೆಗೆದುಕೊಳ್ಳದೆ ಸ್ವಂತ ರಕ್ತವನ್ನೇ ತೆಗೆದುಕೊಂಡು ನಮಗೋಸ್ಕರ ನಿತ್ಯವಿಮೋಚನೆಯನ್ನು ಸಂಪಾದಿಸಿಕೊಂಡವನಾಗಿ ಒಂದೇ ಸಾರಿ ದೇವರ ಸನ್ನಿಧಾನಕ್ಕೆ ಪ್ರವೇಶಿಸಿದನು.
Kannada Bible (KNCL) BSI 2016
ಇಂಥ ಗರ್ಭಗುಡಿಯನ್ನು ಅವರು ಒಮ್ಮೆಗೇ ಶಾಶ್ವತವಾಗಿ ಪ್ರವೇಶಿಸಿದ್ದಾರೆ. ಹೋತಗಳ ಅಥವಾ ಹೋರಿಕರುಗಳ ರಕ್ತವನ್ನು ತೆಗೆದುಕೊಂಡು ಅವರು ಪ್ರವೇಶಿಸಲಿಲ್ಲ. ತಮ್ಮ ಸ್ವಂತ ರಕ್ತವನ್ನೇ ತೆಗೆದುಕೊಂಡು ಪ್ರವೇಶಿಸಿ ನಮಗೆ ಶಾಶ್ವತ ಜೀವೋದ್ಧಾರವು ದೊರಕುವಂತೆ ಮಾಡಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕ್ರಿಸ್ತ ಯೇಸು ಹೋತಗಳ ಮತ್ತು ಕರುಗಳ ರಕ್ತವನ್ನು ತೆಗೆದುಕೊಳ್ಳದೆ ತಮ್ಮ ಸ್ವಂತ ರಕ್ತವನ್ನೇ ತೆಗೆದುಕೊಂಡು ನಮಗೋಸ್ಕರ ನಿತ್ಯವಿಮೋಚನೆಯನ್ನು ಸಂಪಾದಿಸಿಕೊಂಡವರಾಗಿ ಒಂದೇ ಸಾರಿ ಮಹಾ ಪವಿತ್ರ ಸ್ಥಳದೊಳಗೆ ಪ್ರವೇಶಿಸಿದರು.