Hebrews 9:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಆತನ ರಕ್ತವು ಖಚಿತವಾಗಿ ಅದಕ್ಕಿಂತಲೂ ಹೆಚ್ಚಿನದನ್ನು ಸಾಧಿಸುತ್ತದೆ. ಆತನು ನಿತ್ಯಾತ್ಮನ ಮೂಲಕ ತನ್ನನ್ನು ತಾನೇ ದೇವರಿಗೆ ನಿಷ್ಕಳಂಕವಾದ ಯಜ್ಞವನ್ನಾಗಿ ಅರ್ಪಿಸಿಕೊಂಡನು. ಆತನ ರಕ್ತವು ನಮ್ಮನ್ನು ನಮ್ಮ ಕೆಟ್ಟಕಾರ್ಯಗಳಿಂದ ಪರಿಪೂರ್ಣವಾಗಿ ಬಿಡಿಸಿ ನಾವು ಜೀವಸ್ವರೂಪನಾದ ದೇವರನ್ನು ಆರಾಧಿಸಲು ಸಾಧ್ಯವಾಗುವಂತೆ ನಮ್ಮ ಹೃದಯವನ್ನೂ ಪರಿಶುದ್ಧಗೊಳಿಸುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ, ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ, ನಮ್ಮನ್ನು ನಿರ್ಜೀವ ಕ್ರಿಯೆಗಳಿಂದ ಬಿಡಿಸಿ, ನಾವು ಜೀವವುಳ್ಳ ದೇವರನ್ನು ಆರಾಧಿಸುವಂತೆ ನಮ್ಮ ಮನಸ್ಸಾಕ್ಷಿಯನ್ನು ಶುದ್ಧೀಕರಿಸುತ್ತದಲ್ಲವೇ?
Kannada BSI Bible 2016
ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿ ಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ಬಿಡಿಸಿ ಜೀವವುಳ್ಳ ದೇವರನ್ನು ಸೇವಿಸುವಂತೆ ನಿಮ್ಮ ಮನ ಸ್ಸಾಕ್ಷಿಯನ್ನು ಶುದ್ಧೀಕರಿಸು ವದಲ್ಲವೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ ನಮ್ಮನ್ನು ನಿರ್ಜೀವಕರ್ಮಗಳಿಂದ ಬಿಡಿಸಿ ನಾವು ಜೀವವುಳ್ಳ ದೇವರನ್ನು ಆರಾಧಿಸುವವರಾಗುವಂತೆ ನಮ್ಮ ಮನಸ್ಸನ್ನು ಶುದ್ಧೀಕರಿಸುವದಲ್ಲವೇ.
Kannada Bible (KNCL) BSI 2016
ಯೇಸುವಿನ ರಕ್ತವು ಮತ್ತಷ್ಟು ಹೆಚ್ಚಾಗಿ ನಮ್ಮನ್ನು ಪರಿಶುದ್ಧಗೊಳಿಸುತ್ತದಲ್ಲವೇ? ನಿತ್ಯಾತ್ಮದ ಮೂಲಕ ಅವರು ತಮ್ಮನ್ನೇ ನಿಷ್ಕಳಂಕಬಲಿಯಾಗಿ ದೇವರಿಗೆ ಸಮರ್ಪಿಸಿದ್ದಾರೆ; ನಾವು ಜೀವಸ್ವರೂಪರಾದ ದೇವರನ್ನು ಆರಾಧಿಸುವಂತೆ, ಜಡಕರ್ಮಗಳಿಂದ ನಮ್ಮನ್ನು ಬಿಡುಗಡೆಮಾಡಿ ನಮ್ಮ ಅಂತರಂಗವನ್ನು ಪರಿಶುದ್ಧಗೊಳಿಸುತ್ತಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿತ್ಯಾತ್ಮರಿಂದ ತಮ್ಮನ್ನು ತಾವೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತ ಯೇಸುವಿನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ನಮ್ಮನ್ನು ಬಿಡಿಸಿ ಜೀವವುಳ್ಳ ದೇವರನ್ನು ಆರಾಧಿಸುವಂತೆ ನಮ್ಮ ಮನಸ್ಸಾಕ್ಷಿಯನ್ನು ಶುದ್ಧೀಕರಿಸುವುದಲ್ಲವೇ?