Hebrews 9:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈ ಸ್ಥಳವು ಗುಡಾರದ ಒಳಗಿತ್ತು. ಗುಡಾರದ ಮೊದಲ ಆವರಣವನ್ನು ಪವಿತ್ರ ಸ್ಥಳವೆಂದು ಕರೆಯುತ್ತಿದ್ದರು. ಪವಿತ್ರ ಸ್ಥಳದಲ್ಲಿ ದೀಪಸ್ತಂಭ, ಮೇಜು ಮತ್ತು ದೇವರಿಗೆ ಅರ್ಪಿಸಲ್ಪಟ್ಟ ರೊಟ್ಟಿಗಳಿದ್ದುವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಂದು ದೇವದರ್ಶನ ಗುಡಾರವು ಕಟ್ಟಲ್ಪಟ್ಟು, ಅದರ ಮೊದಲನೆಯ ಭಾಗದಲ್ಲಿ ದೀಪಸ್ತಂಭ, ಮೇಜು, ಮತ್ತು ಸಮರ್ಪಿಸಿದ ರೊಟ್ಟಿ ಇವುಗಳಿದ್ದವು. ಅದನ್ನು ಪವಿತ್ರಸ್ಥಳ ಎಂದು ಕರೆಯಲಾಗುತ್ತಿತು.
Kannada BSI Bible 2016
ಅಂದರೆ ಒಂದು ಗುಡಾರವು ಕಟ್ಟಲ್ಪ ಟ್ಟಿತು. ಅದರ ಮೊದಲನೆಯ ಭಾಗದಲ್ಲಿ ದೀಪಸ್ತಂಭ, ಮೇಜು, ಸಮ್ಮುಖದ ರೊಟ್ಟಿ ಇವುಗಳಿದ್ದವು; ಅದಕ್ಕೆ ಪವಿತ್ರ ಸ್ಥಳ ಎಂದು ಹೆಸರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಂದರೆ ಒಂದು ಗುಡಾರವು ಕಟ್ಟಲ್ಪಟ್ಟಿತು; ಅದರ ಮೊದಲನೆಯ ಭಾಗದಲ್ಲಿ ದೀಪಸ್ತಂಭ, ಮೇಜು, ಸಮರ್ಪಿಸಿದ ರೊಟ್ಟಿ ಇವುಗಳಿದ್ದವು; ಅದಕ್ಕೆ ಪವಿತ್ರಸ್ಥಾನ ಎಂದು ಹೆಸರು.
Kannada Bible (KNCL) BSI 2016
ಅಂದರೆ, ಒಂದು ಗುಡಾರವನ್ನು ಕಟ್ಟುತ್ತಿದ್ದರು. ಅದರಲ್ಲಿ ಎರಡು ಭಾಗಗಳು ಇದ್ದವು. ಮೊದಲನೆಯ ಭಾಗಕ್ಕೆ ಪವಿತ್ರಸ್ಥಳ ಎಂದು ಹೆಸರು. ಅಲ್ಲಿ, ಒಂದು ದೀಪಸ್ತಂಭ ಮತ್ತು ಒಂದು ಮೇಜು ಇದ್ದವು. ಆ ಮೇಜಿನ ಮೇಲೆ ಅರ್ಪಣೆಯ ನೈವೇದ್ಯ ರೊಟ್ಟಿಗಳನ್ನು ಇಡುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದರೊಳಗೆ ಒಂದು ಗುಡಾರವು ಕಟ್ಟಲಾಗಿತ್ತು. ಅದರ ಪ್ರಥಮ ಭಾಗದಲ್ಲಿ ದೀಪಸ್ತಂಭ, ಮೇಜು, ಸಮ್ಮುಖದ ರೊಟ್ಟಿ ಇವುಗಳಿದ್ದವು. ಅದು ಪವಿತ್ರ ಸ್ಥಳ ಎಂದು ಕರೆಯಲಾಗಿತ್ತು.